ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಜಾರಿ: ಸಿದ್ದರಾಮಯ್ಯ, ಪ್ರಭಾಕರ್​ಗೆ KUWJ ಅಭಿನಂದನೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡಬೇಕು ಎನ್ನುವುದು ಮೂರು ದಶಕಗಳ ಹೋರಾಟ. ಈ ಹೋರಾಟಕ್ಕೆ ಮನ್ನಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಆದೇಶವನ್ನು ಹೊರಡಿಸಿದೆ.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಜಾರಿ: ಸಿದ್ದರಾಮಯ್ಯ, ಪ್ರಭಾಕರ್​ಗೆ KUWJ ಅಭಿನಂದನೆ
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಸಿದ್ದರಾಮಯ್ಯ KUWJ ಅಭಿನಂದನೆ
Follow us
ವಿವೇಕ ಬಿರಾದಾರ
|

Updated on:Sep 27, 2024 | 7:36 AM

ಬೆಂಗಳೂರು, ಸೆಪ್ಟೆಂಬರ್​ 27: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ (Journalist Free Bus Pass) ಕೊಡಬೇಕು ಎನ್ನುವುದು ಮೂರು ದಶಕಗಳ ಹೋರಾಟ. ಈ ಹೋರಾಟಕ್ಕೆ ಮನ್ನಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಆದೇಶವನ್ನು ಹೊರಡಿಸಿದ್ದು, ಅದಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು (KUWJ) ಅಭಿನಂದಿಸುತ್ತದೆ.

ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ಹಕ್ಕೋತ್ತಾಯ ಪರಿಗಣಿಸಿ, ಬಜೆಟ್‌ನಲ್ಲಿಯೇ ಉಚಿತ ಬಸ್ ಪಾಸ್ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಅಂತೆಯೇ ಬಜೆಟ್‌ನಲ್ಲಿಯೂ ೋಷಣೆ ಮಾಡಿದ್ದರು. ಈಗ ಉಚಿತ ಬಸ್ ಪಾಸ್ ಸೌಲಭ್ಯ ನನಸಾಗುವಂತೆ ಮಾಡಿರುವುದು ಶ್ಲಾಘನೀಯ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: KUWJ ವಾರ್ಷಿಕ ಪ್ರಶಸ್ತಿ:TV9 ಕನ್ನಡ ಡಿಜಿಟಲ್​ನ ಡೆಪ್ಯೂಟಿ ಎಡಿಟರ್ ಜಗದೀಶ್ ​​​ಬೆಳ್ಳಿಯಪ್ಪಗೆ ರವಿ ಬೆಳಗೆರೆ ಪ್ರಶಸ್ತಿ

ಉಚಿತ ಬಸ್ ಪಾಸ್‌ಗೆ 15.66 ಕೋಟಿ ರೂ ಹಣವನ್ನು ಮೀಸಲಿರಿಸಿ ಯೋಜನೆಗೆ ಅನುಮತಿ ಪಡೆಯಲು ವಾರ್ತಾ ಇಲಾಖೆ ಮತ್ತು ಹಣಕಾಸು ಇಲಾಖೆಯಲ್ಲಿ ನಿರಂತರವಾಗಿ ಕೆಯುಡಬ್ಲೂಜೆ ಮಾಡಿದ ಹೋರಾಟದ ಲವಾಗಿ ಯೋಜನೆ ಸಕಾರಗೊಳ್ಳಲು ಸಾಧ್ಯವಾಗಿದೆ. ಇದಕ್ಕೆ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಪ್ರಯತ್ನವೂ ಮಹತ್ವದ್ದು ಎಂದು ತಗಡೂರು ತಿಳಿಸಿದ್ದಾರೆ.

ನುಡಿದಂತೆ ನಡೆದು, ಉಚಿತ ಬಸ್ ಪಾಸ್ ಜಾರಿಗೆ ಬರಲು ಕಾರಣರಾದ ಸಿಎಂ ಸಿದ್ದರಾಮಯ್ಯ, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ ನಿಂಬಾಳ್ಕರ್ ಸೇರಿದಂತೆ ಸಹಕಾರ ಕೊಟ್ಟ ಎಲ್ಲರಿಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೃತಜ್ಞತೆಗಳು ಸಲ್ಲುತ್ತವೆ ಎಂದು ಅವರು ತಿಳಿಸಿದ್ದಾರೆ.

ಸರಳೀಕರಣ ಅಗತ್ಯ

ಯೋಜನೆ ಮೊದಲು ರೂಪುಗೊಂಡು ಜಾರಿಗೆ ಬರಲಿ ಎನ್ನುವುದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮೊದಲ ಆದ್ಯತೆ ಆಗಿತ್ತು. ನಿಯಮಾವಳಿಗಳಲ್ಲಿ ಒಂದಿಷ್ಟು ಕಠಿಣ ಷರತ್ತುಗಳಿರುವುದು ಗಮನಕ್ಕೆ ಬಂದಿದೆ. ಕಾರ್ಯ ನಿರತ ಪತ್ರಕರ್ತರಿಗೆ ಎಲ್ಲರಿಗೂ ಉಚಿತ ಬಸ್ ಪಾಸ್ ಸಿಗಬೇಕು ಎನ್ನುವ ನಿಟ್ಟಿನಲ್ಲಿ ನಿಯಮಾವಳಿ ಸರಳೀಕರಣಕ್ಕೆ ಸಂಘವು ಸರ್ಕಾರದ ಗಮನಕ್ಕೆ ತಂದು ಸರಿಪಡಿಸಲು ಕ್ರಮ ಕೈಗೊಳ್ಳಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:36 am, Fri, 27 September 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್