ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರ ದುರ್ಮರಣ

  • TV9 Web Team
  • Published On - 14:23 PM, 28 Feb 2020
ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರ ದುರ್ಮರಣ

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಭೂಮಿ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ. ಉದ್ಯಮಿ ಎ.ಜೆ.ಶೆಟ್ಟಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ದುರ್ಘಟನೆ ಸಂಭವಿಸಿದೆ. ರಸ್ತೆಯ ಮಣ್ಣನ್ನು ಅವೈಜ್ಞಾನಿಕವಾಗಿ ಅಗೆದಿರುವುದೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ರಸ್ತೆಯನ್ನು ಅವೈಜ್ಞಾನಿಕವಾಗಿ ಅಗೆದಿದ್ದರಿಂದ ರಸ್ತೆ ಹಾಗೂ ಮಣ್ಣು ಕಾರ್ಮಿಕರ ಮೇಲೆ ಕುಸಿದಿದೆ. ಈ ಪರಿಣಾಮ ಕಾರ್ಮಿಕರಿಬ್ಬರು ಮೃತಪಟ್ಟಿದ್ದಾರೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿಯಿಂದ ಜೆಸಿಬಿ ಮೂಲಕ ಮಣ್ಣಿನಡಿ ಸಿಲುಕಿರುವ ಕಾರ್ಮಿಕರನ್ನು ಮೇಲೆತ್ತುವ ಕಾರ್ಯಾಚರಣೆ ಮುಂದುವರೆದಿದೆ.