AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸಹಾಯಧನ ಬಿಡುಗಡೆಗೆ.. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳು ACB ಬಲೆಗೆ

ಮದುವೆ ಸಹಾಯಧನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೇಬರ್‌ ಇನ್​ಸ್ಪೆಕ್ಟರ್​ ಹಾಗೂ ಕಂಪ್ಯೂಟರ್ ಆಪರೇಟರ್‌ ACB ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಮದುವೆ ಸಹಾಯಧನ ಬಿಡುಗಡೆಗೆ.. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳು ACB ಬಲೆಗೆ
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on: Jan 28, 2021 | 10:11 PM

ಚಾಮರಾಜನಗರ: ಮದುವೆ ಸಹಾಯಧನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೇಬರ್‌ ಇನ್​ಸ್ಪೆಕ್ಟರ್​ ಹಾಗೂ ಕಂಪ್ಯೂಟರ್ ಆಪರೇಟರ್‌ ACB ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಸುಮಾರು 3 ಸಾವಿರ ರೂಪಾಯಿ ಲಂಚ ಸ್ವೀಕರಿಸ್ತಿದ್ದ ಲೇಬರ್‌ ಇನ್​ಸ್ಪೆಕ್ಟರ್ ಗೀತಾ ಹಾಗೂ ಕಂಪ್ಯೂಟರ್ ಆಪರೇಟರ್ ಮಾಲತಿ ACB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಮಾಲತಿ ಚೇತನ್ ಎಂಬುವವರ ಬಳಿ 3 ಸಾವಿರ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ACB ಅಧಿಕಾರಿಗಳು ದಾಳಿ ನಡೆಸಿದ್ದರು.

5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ AEE ಎಸಿಬಿ ಬಲೆಗೆ ಇತ್ತ, 5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ AEE ಎಸಿಬಿ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಉಪವಿಭಾಗ ಕಚೇರಿಯಲ್ಲಿ ನಡೆದಿದೆ. ಮೆಸ್ಕಾಂ AEE ಬಿ.ಎಸ್.ಪ್ರಕಾಶ್ ACB ಬಲೆಗೆ ಬಿದ್ದಿದ್ದಾರೆ. ಕೊಳವೆಬಾವಿಗೆ ಟಿಸಿ ಅಳವಡಿಕೆಗೆ 5,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕಾಶ್​ ಹರೀಶ್ ಎಂಬುವವರ ಬಳಿ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಎಸ್‌.ಪಿ ಜಯಪ್ರಕಾಶ್ ನೇತೃತ್ವದ ತಂಡ ದಾಳಿ ನಡೆಸಿದೆ.

ಅನೈತಿಕ ಸಂಬಂಧ ಶಂಕೆ: ದೇವದುರ್ಗದಲ್ಲಿ ಯುವಕನ ರುಂಡವಿಲ್ಲದ ಮೃತದೇಹ ಪತ್ತೆ