ರಾಜ್ಯದ ಶೇ.50ಕ್ಕಿಂತ ಹೆಚ್ಚು ಪ್ರದೇಶದಲ್ಲಿ ಮಳೆ ಕೊರತೆ; ಬರ ಘೋಷಣೆಗೆ ಕೇಂದ್ರ ಅಡ್ಡಿ; ಕೃಷ್ಣಬೈರೇಗೌಡ

ಜೂನ್​​ ಕೊನೆ ಮತ್ತು ಜುಲೈ ಮೊದಲೆರಡು ವಾರಗಳಲ್ಲಿ ಮುಂಗಾರು ಚುರುಕಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ನದಿಗಳಿಗೆ ಒಳಹರಿವು ಹೆಚ್ಚಾಗಿತ್ತು. ಇದರಿಂದ ಜಲಾಶಾಯಗಳು ಭರ್ತಿಯಾಗುತ್ತವೆ ಎಂದು ಊಹಿಸಲಾಗಿತ್ತು. ಆದರೆ ಜುಲೈ ಕೊನೆ ತಿಂಗಳಲ್ಲಿ ಮಳೆ ಕೈಕೊಟ್ಟಿದ್ದು, ಕಡಿಯುವ ನೀರಿಗೆ ಮತ್ತು ಕೃಷಿ ಚಟುವಟಿಕೆಗೆ ನೀರಿನ ಅಬಾವ ಸೃಷ್ಠಿಯಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ ಕರ್ನಾಟಕದಲ್ಲಿ ಶೇ.50ಕ್ಕಿಂತ ಹೆಚ್ಚು ಪ್ರದೇಶದಲ್ಲಿ ಮಳೆ ಕೊರತೆಯಾಗಿದೆ ಎಂದರು.

ರಾಜ್ಯದ ಶೇ.50ಕ್ಕಿಂತ ಹೆಚ್ಚು ಪ್ರದೇಶದಲ್ಲಿ ಮಳೆ ಕೊರತೆ; ಬರ ಘೋಷಣೆಗೆ ಕೇಂದ್ರ ಅಡ್ಡಿ; ಕೃಷ್ಣಬೈರೇಗೌಡ
ಸಚಿವ ಕೃಷ್ಣಬೈರೇಗೌಡ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on: Aug 22, 2023 | 5:20 PM

ಬೆಂಗಳೂರು: ಕರ್ನಾಟಕದಲ್ಲಿ ಶೇ.50ಕ್ಕಿಂತ ಹೆಚ್ಚು ಪ್ರದೇಶದಲ್ಲಿ ಮಳೆ (Rain) ಕೊರತೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಸೆಪ್ಟೆಂಬರ್​ ತಿಂಗಳಲ್ಲೂ ವಾಡಿಕೆಗಿಂತ ಮಳೆ ಕಡಿಮೆ ಆಗಬಹುದು. ಜೂನ್​ನಲ್ಲಿ ತೀವ್ರ ಮಳೆ ಕೊರತೆ, ಜುಲೈನಲ್ಲಿ ಹೆಚ್ಚುವರಿ ಮಳೆ, ಆಗಸ್ಟ್​​ನಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಹೀಗೆ ಮುಂದುವರಿದರೆ ಎಲ್ಲದಕ್ಕೂ ನಾವು ಸನ್ನದ್ಧರಾಗಬೇಕಾಗುತ್ತದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ (Minister Krishna Byre Gowda) ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಆಗಸ್ಟ್​ನಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಕ್ಯಾಬಿನೆಟ್ ಸಬ್ ಕಮಿಟಿ ಸಭೆ ಮಾಡಿದ್ದೇವೆ. ಸಭೆಯಲ್ಲಿ ಮೇವಿನ ಸ್ಥಿತಿ, ಜಲಾಶಯಗಳ (Dam) ನೀರಿನ ಸಂಗ್ರಹ ಸ್ಥಿತಿಗತಿ ಬಗ್ಗೆ ಮಾಹಿತಿ ಮಾಹಿತಿ ಸಂಗ್ರಹಿಸಿದ್ದೇವೆ. ಬಿತ್ತನೆ ಬೆಳೆಗಳು ಒಣಗುತ್ತಿರುವುದರಿಂದ ಕ್ರಮ ತೆಗೆದುಕೊಳ್ಳಬೇಕಿದೆ ಎಂದರು.

ರಾಜ್ಯದಲ್ಲಿ ಕುಡಿಯುವ ನೀರಿಗೆ ಅಂತಹ ಸಮಸ್ಯೆ ಏನೂ ಆಗಿಲ್ಲ. 140ಕ್ಕೂ ಹೆಚ್ಚು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಜಾನುವಾರು ಮೇವು 15-30 ವಾರಗಳಿಗೆ ಆಗುವಷ್ಟು ಸಂಗ್ರಹವಿದೆ. ಆಲಮಟ್ಟಿ ಜಲಾಶಯ ಶೇ 100 ರಷ್ಟು ಭರ್ತಿಯಾಗಿದೆ. ಬೆಳೆಗಳ ಪರಿಸ್ಥಿತಿ ಬಗ್ಗೆ ತಿಳಿಯಲು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹೋಗಬೇಕು. ಬೆಳೆ ಸಮೀಕ್ಷೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. 120 ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ಮಾಡಿ 10 ದಿನದಲ್ಲಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದರು ಹೇಳಿದರು.

ಇದನ್ನೂ ಓದಿ: ಕರ್ನಾಟಕದ ಬಹುತೇಕ ಜಲಾಶಯಗಳಲ್ಲಿ ನೀರಿನ ಸಂಗ್ರಹದಲ್ಲಿ ಭಾರೀ ಕುಸಿತ; ಯಾವ ಜಲಾಶಯದಲ್ಲಿ ಎಷ್ಟಿದೆ ನೀರು? ಇಲ್ಲಿದೆ ವಿವರ

ಇದು ಕಡ್ಡಾಯ ಮಾನದಂಡ ಆಗಿದ್ದು ವರದಿ ಆಧರಿಸಿ ಬರ ಘೋಷಣೆ ಪ್ರಕ್ರಿಯೆ ಮಾಡುತ್ತೇವೆ. ಬರ ಘೋಷಣೆ ಬಗ್ಗೆ ಕ್ಯಾಬಿನೆಟ್ ಸಬ್ ಕಮಿಟಿ ಮಾಹಿತಿ ಪಡೆದುಕೊಂಡಿದೆ. ಬರ ಘೋಷಣೆಗೆ ಏನೇನು ಮಾನದಂಡ ಎಂಬ ಬಗ್ಗೆ ಚರ್ಚೆ ಆಗಿದೆ. ಬರ ಘೋಷಣೆಗೆ ಬೇಕಾದ ಎಲ್ಲ ಮಾನದಂಡ ಪಾಲನೆ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರದವರು 2016 ಹಾಗೂ 2020 ರಲ್ಲಿ ಮಾನದಂಡ ಪರಿಷ್ಕರಣೆ ಮಾಡಿ ಮಾನದಂಡ ಬಿಗಿ ಮಾಡಿದ್ದಾರೆ. ಇವತ್ತಿನ ಪರಿಸ್ಥಿತಿ ಗೆ ಸೂಕ್ತ ಆಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಮಾನದಂಡ ಇಟ್ಟುಕೊಂಡು ಹೋದಾಗ ಶೇ 60 ರಷ್ಟು ಮಳೆ ಕೊರತೆ ಆಗಬೇಕು ಅಂತಾರೆ. ಕೇಂದ್ರ ಸರ್ಕಾರದ ಮಾನದಂಡ ಸರಳೀಕರಣ ಮಾಡಬೇಕು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ ಕೇಂದ್ರದಿಂದ ನಮಗೆ ಇನ್ನೂ ಮಾನದಂಡ ಸರಳೀಕರಣ ವಿಚಾರದಲ್ಲಿ ಉತ್ತರ ಬಂದಿಲ್ಲ. ಮಾನದಂಡಗಳ ಸರಳೀಕರಣ ಆಗಲೇಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್