ಹೈಕಮಾಂಡ್​ ಡಿಕೆಶಿ​ ರಾಜೀನಾಮೆ ಪಡೆಯಲಿ: ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಆಗ್ರಹ

ಸಿಡಿ ಸಂತ್ರಸ್ತೆಯ ತಂದೆ ಮತ್ತು ತಾಯಿ ಮಾಡುತ್ತಿರುವ ಆರೋಪ ಮೇಲ್ನೋಟಕ್ಕೆ ಸತ್ಯ ಎನಿಸುತ್ತಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಲಖನ್ ಒತ್ತಾಯಿಸಿದ್ದಾರೆ.

ಹೈಕಮಾಂಡ್​ ಡಿಕೆಶಿ​ ರಾಜೀನಾಮೆ ಪಡೆಯಲಿ: ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಆಗ್ರಹ
ಲಖನ್ ಜಾರಕಿಹೊಳಿ ಮತ್ತು ಡಿ.ಕೆ.ಶಿವಕುಮಾರ್
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: ಸಾಧು ಶ್ರೀನಾಥ್​

Updated on:Apr 01, 2021 | 6:59 PM

ಬೆಳಗಾವಿ: ಕಾಂಗ್ರೆಸ್ ಹೈಕಮಾಂಡ್​ ಈ ಕೂಡಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರಿಂದ​ ರಾಜೀನಾಮೆ ಪಡೆಯಬೇಕು ಎಂದು ಸಿಡಿ ಪ್ರಕರಣದ ಯುವತಿಯಿಂದ ಅತ್ಯಾಚಾರ ಆರೋಪ ಎದುರಿಸುತ್ತಿರುವ ರಮೇಶ್ ಜಾರಕಿಹೊಳಿ ಅವರ ತಮ್ಮ ಲಖನ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಸಿಡಿ ಸಂತ್ರಸ್ತೆಯ ತಂದೆ ಮತ್ತು ತಾಯಿ ಮಾಡುತ್ತಿರುವ ಆರೋಪ ಮೇಲ್ನೋಟಕ್ಕೆ ಸತ್ಯ ಎನಿಸುತ್ತಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಲಖನ್ ಒತ್ತಾಯಿಸಿದ್ದಾರೆ.

ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದವರಿದಿರುವುದು ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಯ ಮೇಲೆ ಕಾಂಗ್ರೆಸ್​ಗೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ದುಷ್ಮನ್​ ಕಹಾ ಹೈ ಅಂದ್ರೆ ಬಗಲ್​ ಮೆ ಹೈ ಅಂದಂತಿದೆ ನಮ್ಮ ಪರಿಸ್ಥಿತಿ. ಯಾರನ್ನು ನಂಬಿ ಪ್ರಚಾರಕ್ಕೆ ಹೋಗುವುದು ಅನ್ನುವಂತಾಗಿದೆ ಕಾರ್ಯಕರ್ತರ ಸ್ಥಿತಿ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.

ಡಿ.ಕೆ.ಶಿವಕುಮಾರ್​​ ಬಗ್ಗೆ ಹುಷಾರಾಗಿರುವಂತೆ ಸತೀಶ್ ಜಾರಕಿಹೊಳಿಗೆ ಲಖನ್​ ಕಿವಿಮಾತು ಡಿ.ಕೆ.ಶಿವಕುಮಾರ್​​ ಬಗ್ಗೆ ಹುಷಾರಾಗಿರುವಂತೆ ಸತೀಶ್ ಜಾರಕಿಹೊಳಿಗೆ ಲಖನ್​ ಕಿವಿಮಾತು ಹೇಳಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ರಾಜೀನಾಮೆ ನೀಡಿದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಅನುಕೂಲವಾಗುತ್ತದೆ. ಕಾಂಗ್ರೆಸ್​ ಹೈಕಮಾಂಡ್ ಈ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು. ಸಿಡಿ ಸಂತ್ರಸ್ತ ಯುವತಿಯ ಪೋಷಕರ ಆರೋಪಗಳ ಬಗ್ಗೆಯೂ ಕಾಂಗ್ರೆಸ್ ನಾಯಕರು ಪರಿಶೀಲಿಸಬೇಕು ಎಂದು ಹೇಳಿದರು. ಈಚೆಗೆ ನಡೆದಿರುವ ಕೆಲ ಬೆಳವಣಿಗೆಗಳಿಂದಾಗಿ ಪ್ರಚಾರಕ್ಕೆ ಹೋಗಲು ಕಾರ್ಯಕರ್ತರಿಗೆ ಮುಜುಗರವಾಗುತ್ತಿದೆ ಎಂದು ದೂರಿದರು.

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ದಿವಂಗತ ಬಿ.ನಾರಾಯಣರಾವ್ ಪತ್ನಿ ಮಲ್ಲಮ್ಮ, ಮಸ್ಕಿ ಕ್ಷೇತ್ರದಲ್ಲಿ ಬಸವನಗೌಡ ತುರವಿಹಾಳಗೆ ಟಿಕೆಟ್ ಘೋಷಿಸಲಾಗಿದೆ. ಸಿಂದಗಿ ಕ್ಷೇತ್ರದ ಉಪ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಆದರೆ ಕಾಂಗ್ರೆಸ್​ ಅಭ್ಯರ್ಥಿಯಾಗಿ ಅಶೋಕ್ ಮನಗೂಳಿಗೆ ಟಿಕೆಟ್‌ ಘೋಷಿಸಿದೆ.

ಏಪ್ರಿಲ್ 17 ರಂದು ಉಪಚುನಾವಣೆಗಳ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಮಾರ್ಚ್ 31 ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 2 ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿತ್ತು. ಕೊರೊನಾ ಸೋಂಕಿಗೆ ತುತ್ತಾಗಿದ್ದ 65 ವರ್ಷದ ಸುರೇಶ್ ಅಂಗಡಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ 10 ದಿನಗಳ ಕಾಲ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆದಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಕಾರಣ ವೆಂಟಿಲೇಟರ್ ತೆಗೆದು ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದರು. ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿಯು ದಿವಂಗತ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಸುರೇಶ್ ಅಂಗಡಿ ಅವರಿಗೆ ಟಿಕೆಟ್ ನೀಡಿದೆ. ಮಸ್ಕಿ ಕ್ಷೇತ್ರದಿಂದ ಪ್ರತಾಪಗೌಡ ಪಾಟೀಲ್​ ಹಾಗೂ ಬಸವಕಲ್ಯಾಣ ಕ್ಷೇತ್ರದಿಂದ ಶರಣು ಸಲಗರಗೆ ಬಿಜೆಪಿ ಟಿಕೆಟ್​ ನೀಡಲಾಗಿದೆ.

ಇದನ್ನೂ ಓದಿ: ಬೆಳಗಾವಿ ಲೋಕಸಭಾ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಕೆ

ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ, ಮಸ್ಕಿ ಕಡೆಗೆ ಪ್ರಚಾರಕ್ಕೆ ತೆರಳಿದ ಕಾಂಗ್ರೆಸ್ ದಂಡು

Lakhan Jarkiholi demands resignation of DK Shivakumar

Published On - 6:39 pm, Thu, 1 April 21