ಅಪಘಾತಕ್ಕೀಡಾದ ಕಾರಲ್ಲಿ ನನ್ನ ಪುತ್ರ ಚಿದಾನಂದ ಇರಲಿಲ್ಲ: ಡಿಸಿಎಂ ಲಕ್ಷ್ಮಣ ಸವದಿ

ಕಾರಿನಲ್ಲಿ ನನ್ನ ಮಗ ಇರಲಿಲ್ಲ. ಹೀಗಾಗಿ ಎಫ್​ಐಆರ್​ನಲ್ಲಿಯೂ ಆತನ ಹೆಸರು ಸೇರಿಲ್ಲ. ಏನೇ ಆದರೂ ಅಪಘಾತ ಅಂದ್ರೆ ಅಪಘಾತವೇ. ಪೊಲೀಸರು ಕಾನೂನಿನ ಪ್ರಕಾರ ಕ್ರಮ ಜರುಗಿಸುತ್ತಾರೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದರು.

ಅಪಘಾತಕ್ಕೀಡಾದ ಕಾರಲ್ಲಿ ನನ್ನ ಪುತ್ರ ಚಿದಾನಂದ ಇರಲಿಲ್ಲ: ಡಿಸಿಎಂ ಲಕ್ಷ್ಮಣ ಸವದಿ
ಡಿಸಿಎಂ ಲಕ್ಷ್ಮಣ ಸವದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 06, 2021 | 3:39 PM

ಮೈಸೂರು: ಬಾಗಲಕೋಟೆ ಜಿಲ್ಲೆಯ ಚಿಕ್ಕಹಂಡರಗಲ್ ಕ್ರಾಸ್ ಬಳಿ ನಡೆದಿದ್ದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಅಪಘಾತಕ್ಕೀಡಾದ ಕಾರಲ್ಲಿ ನನ್ನ ಪುತ್ರ ಚಿದಾನಂದ ಇರಲಿಲ್ಲ ಎಂದು ಹೇಳಿದರು.

ಕಾರಿನಲ್ಲಿ ನನ್ನ ಮಗ ಇರಲಿಲ್ಲ. ಹೀಗಾಗಿ ಎಫ್​ಐಆರ್​ನಲ್ಲಿಯೂ ಆತನ ಹೆಸರು ಸೇರಿಲ್ಲ. ಏನೇ ಆದರೂ ಅಪಘಾತ ಅಂದ್ರೆ ಅಪಘಾತವೇ. ಪೊಲೀಸರು ಕಾನೂನಿನ ಪ್ರಕಾರ ಕ್ರಮ ಜರುಗಿಸುತ್ತಾರೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದರು. ನನ್ನ ಪುತ್ರ ಕಾರಿನಲ್ಲಿದ್ದರೂ ಅಪಘಾತ ಮಾಡು ಎನ್ನುತ್ತಿರಲಿಲ್ಲ.

ಗಾಯಗೊಂಡವರಿಗೆ ತುರ್ತು ನೆರವು ಒದಗಿಸಲು ನನ್ನ ಮಗ ನೆರವಾಗಿದ್ದಾನೆ. ಆದರೆ ಗಾಯಾಳು ಬೈಕ್ ಸವಾರ ಕೂಡಲೆಪ್ಪ ಬದುಕಿ ಬರಲಿಲ್ಲ. 2 ದಿನಗಳ ನಂತರ ಮೃತರ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳುವೆ. ಅವರ ಕುಟುಂಬಕ್ಕೂ ನನ್ನ ಕೈಲಾದಷ್ಟು ಸಹಾಯ ಮಾಡುತ್ತೇನೆ ಎಂದು ಲಕ್ಷ್ಮಣ ಸವದಿ ತಿಳಿಸಿದರು.

ಪೊಲೀಸರಿಂದ ಪಂಚನಾಮೆ ಲಕ್ಷ್ಮಣ ಸವದಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಹುನಗುಂದ ಪೊಲೀಸರು ಪ್ರತ್ಯಕ್ಷದರ್ಶಿಗಳನ್ನು ಸ್ಥಳಕ್ಕೆ ಕರೆಸಿ ಪಂಚನಾಮೆ ಮಾಡಿದರು. ಬಾಗಲಕೋಟೆ ಜಿಲ್ಲೆಯ ಚಿಕ್ಕಹಂಡರಗಲ್ ಕ್ರಾಸ್ ಬಳಿ ನಡೆದಿದ್ದ ಅಪಘಾತ ಸಂಭವಿಸಿತ್ತು.

(Lakshman Savadi Denies his son involvement in Accident Near Hungund)

ಇದನ್ನೂ ಓದಿ: DCM Laxman Savadi Son: ಡಿಸಿಎಂ ಲಕ್ಷ್ಮಣ ಸವದಿ ಮಗನ ಕಾರು ಬೈಕ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು

ಇದನ್ನೂ ಓದಿ: ಅಪಘಾತವಾದ ತಕ್ಷಣ ತಂದೆ ಲಕ್ಷ್ಮಣ ಸವದಿಯನ್ನ ಸಂಪರ್ಕಿಸಿದ ಪುತ್ರ; ತಕ್ಷಣ ಬಾಗಲಕೋಟೆ ಎಸ್‌ಪಿಗೆ ಕರೆ ಮಾಡಿದ ಸಚಿವ ಸವದಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?