AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ನನ್ನ ಕರ್ಮ ಭೂಮಿ ಎಂದ ಶೆಟ್ಟರ್​ಗೆ ತಿರುಗೇಟು ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? ಹುಬ್ಬಳ್ಳಿಗೆ ನನ್ನ ಕರ್ಮಭೂಮಿ ಅಂದ್ರೆ ಆ ಜನ ಒಪ್ತಾರಾ? ನಾವೇನು ಹುಚ್ಚರಿದ್ದೇವಾ ಎಂದು ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ‘ಚುನಾವಣೆಗಾಗಿ ಕಾಂಗ್ರೆಸ್ ಕೇಸರಿ ಶಾಲಿನ ಮೊರೆ ಹೋಗಿದೆ’ ಎಂದು ಹೇಳಿದ್ದಾರೆ.

ಬೆಳಗಾವಿ ನನ್ನ ಕರ್ಮ ಭೂಮಿ ಎಂದ ಶೆಟ್ಟರ್​ಗೆ ತಿರುಗೇಟು ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್, ಲಕ್ಷ್ಮೀ ಹೆಬ್ಬಾಳ್ಕರ್
Sahadev Mane
| Edited By: |

Updated on: Mar 28, 2024 | 4:28 PM

Share

ಬೆಳಗಾವಿ, ಮಾರ್ಚ್​ 28: ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಹೊರಗೆ ಹಾಕಿಸಿಕೊಂಡು ಇಲ್ಲಿ ಬಂದು ಮಾತನಾಡುತ್ತಿದ್ದಾರೆ. ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? ಹುಬ್ಬಳ್ಳಿಗೆ ನನ್ನ ಕರ್ಮಭೂಮಿ ಅಂದ್ರೆ ಆ ಜನ ಒಪ್ತಾರಾ? ನಾವೇನು ಹುಚ್ಚರಿದ್ದೇವಾ ಎಂದು ಜಗದೀಶ್ ಶೆಟ್ಟರ್ ವಿರುದ್ಧ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar)​ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಜನರನ್ನ ಬಕ್ರಾ ಮಾಡಲು ಬಂದಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ.

ಬಿಜೆಪಿಯಿಂದ ಶೆಟ್ಟರ್ ಆರು ಬಾರಿ ಆರಿಸಿ ಬಂದಿದ್ದಾರೆ. ಸಿಎಂ, ಮಂತ್ರಿಯಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಜಿಲ್ಲೆ ಮತ್ತು ಕಾರ್ಯಕರ್ತರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿದೆ. ಅವರ ಕಾರ್ಯಕರ್ತರೇ ಗೋಬ್ಯಾಕ್​ ಎಂದು ಹೇಳುತ್ತಿದ್ದಾರೆ ಎಂದರು.

ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನನ್ನು​ ಗೆಲ್ಲಿಸುವ ಹೊಣೆ ಜಾರಕಿಹೊಳಿಗೆ, ಪ್ರಿಯಾಂಕಾರನ್ನ ಗೆಲ್ಲಿಸುವ ಜವಾಬ್ದಾರಿ ಹೆಬ್ಬಾಳ್ಕರ್​ಗೆ !

‘ಚುನಾವಣೆಗಾಗಿ ಕಾಂಗ್ರೆಸ್ ಕೇಸರಿ ಶಾಲಿನ ಮೊರೆ ಹೋಗಿದೆ’. ಇವೆಲ್ಲಾ ಚುನಾವಣೆ ವಿಚಾರಗಳೇ ಅಲ್ಲ. ಸಂಸದರು ಯಾರು, ಅವರ ಜವಾಬ್ದಾರಿ ಏನು ಜನ ತೀರ್ಮಾನಿಸುತ್ತಾರೆ. ಒಂದೇ ವರ್ಷದಲ್ಲಿ ಒಂದು ಸಾವಿರ ಕೋಟಿ ಅನುದಾನ ತಂದಿದ್ದೇನೆ. ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಸಂಸತ್ತಿನಲ್ಲಿ ಜನರ ಧ್ವನಿಯಾಗಿ ಮಾತನಾಡುವ ನಾಯಕ‌ ಬೇಕು ಎಂದು ಹೇಳಿದ್ದಾರೆ.

ಮೋದಿ ಹಾಗೂ ರಾಹುಲ್ ಗಾಂಧಿಯಷ್ಟು ದೊಡ್ಡವರಾ?

ರಾಹುಲ್ ಗಾಂಧಿ ಬೇರೆ ರಾಜ್ಯದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಶೆಟ್ಟರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಶೆಟ್ಟರ್, ಮೋದಿ ಹಾಗೂ ರಾಹುಲ್ ಗಾಂಧೀಯಷ್ಟು ದೊಡ್ಡವರಾ? ಜಿಲ್ಲೆಗೆ ಅವರ ಕೊಡುಗೆ ಏನೂ? ಕೊವಿಡ್ ಸಂದರ್ಭದಲ್ಲಿ ನಮಗೆ ಅಲಾಟ್ ಆಗಿದ್ದ ಆಕ್ಸಿಜನ್ ಹುಬ್ಬಳ್ಳಿ ಧಾರವಾಡಕ್ಕೆ ತಗೊಂಡು ಹೋಗಿದ್ದಾರೆ. ಇವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಕರ್ಮಭೂಮಿಗೆ ಎಷ್ಟು ನ್ಯಾಯ ಒದಗಿಸಿದ್ದಾರೆ ಎಂದು ಏಕವಚನದಲ್ಲಿ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುವ ನಿರೀಕ್ಷೆ ಇದೆ: ಲಕ್ಷ್ಮಣ ಸವದಿ, ಶಾಸಕ

ಅರಬಾವಿ, ಗೋಕಾಕ್​ದಲ್ಲಿ ಕಾಂಗ್ರೆಸ್​ಗೆ ಮತ ಬರುತ್ತಾ ಎಂಬ ಪ್ರಶ್ನೆ‌ಗೆ ಉತ್ತರಿಸಿದ ಅವರು, ರಾಜಕಾರಣ ನಿಂತ ನೀರಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಇತಿಹಾಸ ಇರಲಿಲ್ಲ. ಒಂದಲ್ಲ ಎರಡು ಬಾರಿ ಅಲ್ಲಿ ಗೆದ್ದು ಇತಿಹಾಸ ನಿರ್ಮಾಣ ಆಗಿದೆ. ನಾವು ಅಲ್ಲಿ ಕೆಲಸ ಮಾಡಿ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದೇವೆ. ಗ್ರಾಮೀಣ ಕ್ಷೇತ್ರದಲ್ಲಿ ನಮ್ಮ‌ ಜಾತಿಯೇ ಇಲ್ಲ ಅಲ್ಲಿಯೇ ನಾವು ಇತಿಹಾಸ ನಿರ್ಮಿಸಿದ್ದೇವೆ‌. ಅರಬಾವಿ, ಗೋಕಾಕ್​ನಲ್ಲಿ ಜನ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್