AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi Scheme: ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್​ ಘೋಷಣೆ

Minister Lakshmi Hebbalkar Press Meet: ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅಂದರೆ ಜೂನ್ 16ರಿಂದ ಆನ್​ಲೈನ್, ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಘೋಷಣೆ ಮಾಡಿದ್ದಾರೆ.

Gruha Lakshmi Scheme: ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್​ ಘೋಷಣೆ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​
ರಮೇಶ್ ಬಿ. ಜವಳಗೇರಾ
|

Updated on:Jun 15, 2023 | 11:19 AM

Share

ಬೆಂಗಳೂರು: ಮನೆ ಯಜಮಾನಿಗೆ 2000 ರೂ ನೀಡುವ ಗೃಹಲಕ್ಷ್ಮೀ ಯೋಜನೆಗೆ(Gruha Lakshmi Scheme) ನಾಳೆಯಿಂದ ಅಂದರೆ ಜೂನ್ 16ರಿಂದ ಆನ್​ಲೈನ್, ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರು ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್​, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್​ ಮಾಹಿತಿ ನೀಡಬೇಕು. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ನಾಳೆ ಶಕ್ತಿ ಭವನದಲ್ಲಿ ಸಿದ್ದರಾಮಯ್ಯನವರಿಂದ ಸೇವಾ ಸಿಂಧು ವೆಬ್ ಲಾಂಚ್ ಆಗಲಿದ್ದು, ನಾಳೆ ಮಧ್ಯಾಹ್ನ 1.30ರಿಂದ ಅರ್ಜಿ ಸಲ್ಲಿಕೆ ಮಾಡಬಬಹುದು. ‘ಗೃಹಲಕ್ಷ್ಮೀ’ಯೋಜನೆಗೆ ವಾರ್ಷಿಕ ಅಂದಾಜು 30 ಸಾವಿರ ಕೋಟಿ ವೆಚ್ಚ ನಿರೀಕ್ಷೆ ಇದ್ದು, ಆಗಸ್ಟ್ 18ರಂದು ಬೆಳಗಾವಿ ಅಥವಾ ಹುಬ್ಬಳ್ಳಿಯಲ್ಲಿ ‘ಗೃಹಲಕ್ಷ್ಮೀ’ಗೆ ಚಾಲನೆಗೆ ಸಿಎಂ ಸಿದ್ದರಾಮಯ್ಯನವರ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಯೋಜನೆಗೆ ತೆರಿಗೆ ಕಟ್ಟುವವರು ಅರ್ಜಿ ಸಲ್ಲಿಸಿದರೆ ಅದು ರಿಜೆಕ್ಟ್ ಆಗಲಿದೆ. ಇ ಗವರ್ನೆನ್ಸ್‌ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಅರ್ಜಿದಾರರ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ದರೆ ಅರ್ಜಿ ಸ್ವೀಕಾರ ಆಗವುದಿಲ್ಲ. ಆದ್ದರಿಂದ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಮುಖ ಅಂಶಗಳು:

  • ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ
  • ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ (https://sevasindhugs.karnataka.gov.in/gruhalakshmi)
  •  ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.
  • ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ.
  • ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿದ್ದು, ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.
  • ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ.

Published On - 10:45 am, Thu, 15 June 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?