ಯೋಗ್ಯತೆ ಇದ್ರೂ ಯೋಗ ಇಲ್ಲ: ಟಿಕೆಟ್ ಕೈತಪ್ಪಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ಅಸಮಾಧಾನ
ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಸಮಾನ ಮನಸ್ಕರ ಸಭೆ ನಡೆಸಿ ಮಾಡತನಾಡಿದ ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ, ಧಾರವಾಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದಾರೆ. ಈ ಬಾರಿ ನಾನು ಪ್ರವೇಶ ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ. ಯೋಗ್ಯತೆ ಇದರೂ ಯೋಗ ಇಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಹುಬ್ಬಳ್ಳಿ, ಮಾರ್ಚ್ 22: ಧಾರವಾಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅಳಿಯ ರಜತ್ ಉಳ್ಳಾಗಡ್ಡಿಮಠ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ಇಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಸಮಾನ ಮನಸ್ಕರ ಸಭೆ ನಡೆಸಿ ಮಾಡತನಾಡಿದ ಅವರು, ಯೋಗ್ಯತೆ ಇದ್ದರೂ ಯೋಗ ಇಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಳೆದ ಎಂಟು ತಿಂಗಳಿಂದ ನಾನು ಪಕ್ಷ ಸಂಘಟನೆ ಮಾಡಿದ್ದೆ. ಎಲ್ಲ ಸರ್ವೆಯಲ್ಲೂ ನನ್ನ ಹೆಸರು ಮುನ್ನಡೆಯಲ್ಲಿತ್ತು. ಆದರೆ ಇದೀಗ ಟಿಕೆಟ್ ಬೇರೆಯವರಿಗೆ ಘೋಷಣೆ ಆಗಿದೆ ಎಂದು ಹೇಳಿದ್ದಾರೆ.
ಎಂಎಲ್ಎ ಚುನಾವಣೆಯಲ್ಲೂ ನನಗೆ ಟಿಕೆಟ್ ತಪ್ಪಿತ್ತು. ಚುನಾವಣೆಯಲ್ಲಿ ನಾನು ಪರೀಕ್ಷೆ ಬರೆದರೂ ಉತ್ತರ ಪತ್ರಿಕೆ ಕಸಿದುಕೊಂಡು ಹೋದರು. ಆದರೆ ವೀಕ್ ಅಭ್ಯರ್ಥಿಗೆ ಟಿಕೆಟ್ ಕೊಟ್ಟರು. ಅವರು ಹತ್ತು ಮಾರ್ಕ್ಸ್ ತಗೋಲಿಲ್ಲ ಎಂದು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ವಿರುದ್ದ ವಾಗ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ:ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಗೆ ಲಿಂಗಾಯತ ಮುಖಂಡರಿಂದ ಒತ್ತಡ
ಸಮಾನ ಮನಸ್ಕರ ಸಭೆಯಲ್ಲಿ ಹುಬ್ಬಳ್ಳಿ-ಧಾರವಾಡ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರು ಮತ್ತು ಕಾರ್ಯಕರ್ತರು ಭಾಗಿ ಆಗಿದ್ದರು.
ರಜತ್ ಉಳ್ಳಾಗಡ್ಡಿಮಠ ಟ್ವೀಟ್
ಕೆಲವೊಮ್ಮೆ ಯೋಗ್ಯತೆ ಇದ್ದರೂ ಯೋಗ ಇರುವುದಿಲ್ಲ. ಸ್ಪರ್ಧಿಸಲು ಅವಕಾಶದ ನಿರೀಕ್ಷೆಯಲ್ಲಿದ್ದೆ. ಆದರೆ ಅದೃಷ್ಟ ನನ್ನ ಕೈಹಿಡಿಯಲಿಲ್ಲ.
ಏನಾದರಾಗಲಿ ಪಕ್ಷದ ನಿರ್ಧಾರವನ್ನು ಗೌರವಿಸುತ್ತೇನೆ. ನಮ್ಮ ಸಂವಿಧಾನದ ರಕ್ಷಣೆ, ಕ್ಷೇತ್ರದ ಅಭಿವೃದ್ಧಿ ಮುಖ್ಯ.
ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾದ ವಿನೋದ್ ಅಸೂಟಿ ಅವರಿಗೆ ಶುಭ ಹಾರೈಸುತ್ತೇನೆ. pic.twitter.com/N8RqumoNRv
— Rajat Ullagaddimath (@RVUllagaddimath) March 21, 2024
ವಿನೋದ್ ಅಸೂಟಿ ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಈ ಕುರಿತಾಗಿಯೇ ನಿನ್ನೆಯೆ ಸಾಮಾಜಿಕ ಜಾಲತಾಣದಲ್ಲಿ ರಜತ್ ಅಸಮಾಧಾನ ಹೊರಹಾಕಿದ್ದರು. ‘ಕೆಲವೊಮ್ಮೆ ಯೋಗ್ಯತೆ ಇದ್ದರೂ ಯೋಗ ಇರುವುದಿಲ್ಲ. ಸ್ಪರ್ಧಿಸಲು ಅವಕಾಶದ ನಿರೀಕ್ಷೆಯಲ್ಲಿದ್ದೆ. ಆದರೆ ಅದೃಷ್ಟ ನನ್ನ ಕೈಹಿಡಿಯಲಿಲ್ಲ. ಏನಾದರಾಗಲಿ ಪಕ್ಷದ ನಿರ್ಧಾರವನ್ನು ಗೌರವಿಸುತ್ತೇನೆ. ನಮ್ಮ ಸಂವಿಧಾನದ ರಕ್ಷಣೆ, ಕ್ಷೇತ್ರದ ಅಭಿವೃದ್ಧಿ ಮುಖ್ಯ. ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾದ ವಿನೋದ್ ಅಸೂಟಿ ಅವರಿಗೆ ಶುಭ ಹಾರೈಸುತ್ತೇನೆ’ ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:03 pm, Fri, 22 March 24