AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ!

ಕರ್ನಾಟಕದಲ್ಲಿ ಎರಡೇ ವರ್ಷಗಳಲ್ಲಿ 90,000 ಸರ್ಕಾರಿ ಜಾಗಗಳು ಒತ್ತುವರಿಯಾಗಿರುವ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ಕಂದಾಯ ಇಲಾಖೆಯ ‘ಲ್ಯಾಂಡ್ ಬೀಟ್ ಡಿಜಿಟಲ್ ಸರ್ವೈಲೆನ್ಸ್’ ಕಾರ್ಯಕ್ರಮದಡಿ, ಕಳೆದ ಎರಡು ವರ್ಷಗಳಲ್ಲಿ 13.9 ಲಕ್ಷಕ್ಕೂ ಹೆಚ್ಚು ಭೂಮಿಗಳನ್ನು ಪರಿಶೀಲಿಸಲಾಗಿದೆ. ಪರಿಶೀಲನೆ ವೇಳೆ ಈ ಅಕ್ರಮಗಳು ಬೆಳಕಿಗೆ ಬಂದಿವೆ.

ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jan 19, 2026 | 10:03 AM

Share

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ (Karnataka) ಕಳೆದ ಎರಡು ವರ್ಷಗಳಲ್ಲಿ 90 ಸಾವಿರದಷ್ಟು ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರಿ ಭೂಮಿಯ ಸಂರಕ್ಷಣೆಗಾಗಿ ತಂತ್ರಜ್ಞಾನ ಆಧಾರಿತ ಪ್ರಯತ್ನವಾಗಿ ಕಂದಾಯ ಇಲಾಖೆಯು ‘ಲ್ಯಾಂಡ್ ಬಿಟ್ ಡಿಜಿಟಲ್ ಸರ್ವೈಲೆನ್ಸ್ (Land Beat digital surveillance)’ ಕಾರ್ಯಕ್ರಮ ಅನುಷ್ಠಾನಗೊಳಿಸಿತ್ತು. ಇದರಡಿ ಕಳೆದ ಎರಡು ವರ್ಷಗಳಲ್ಲಿ 13.9 ಲಕ್ಷಕ್ಕೂ ಹೆಚ್ಚು ಸರ್ಕಾರಿ ಭೂಮಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ, ಒತ್ತುವರಿ ವಿಚಾರ ಬಯಲಾಗಿದೆ.

ಲ್ಯಾಂಡ್ ಬಿಟ್ ಡಿಜಿಟಲ್ ಸರ್ವೈಲೆನ್ಸ್ ಕಾರ್ಯಕ್ರಮದಡಿ ಪರಿಶೀಲನೆ 2024 ರಿಂದ ಚುರುಕುಗೊಂಡಿತ್ತು. 2024ರ ಮಾರ್ಚ್ ವೇಳೆಗೆ 27,380 ಜಾಗಗಳನ್ನು ಪರಿಶೀಲನೆ ನಡೆಸಲಾಗಿದ್ದರೆ, ಜುಲೈ ವೇಳೆಗೆ ಆ ಸಂಖ್ಯೆ 10.7 ಲಕ್ಷಕ್ಕೆ ಏರಿಕೆ ಕಂಡಿತ್ತು. ಸೆಪ್ಟೆಂಬರ್ ವೇಳೆಗೆ 13, ದಾಟಿತ್ತು. 2025ರ ಡಿಸೆಂಬರ್ 24ರ ವೇಳೆಗೆ ಒಟ್ಟು 13,94,519 ಸರ್ಕಾರಿ ಜಾಗಗಳನ್ನು ಪರಿಶೀಲನೆ ನಡೆಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಹೇಗೆ ನಡೆದಿತ್ತು ಲ್ಯಾಂಡ್ ಬೀಟ್ ಡಿಜಿಟಲ್ ಸರ್ವೈಲೆನ್ಸ್?

ಗ್ರಾಮ ಲೆಕ್ಕಿಗರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು (ವಿಎಒ) ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಳಸಿಕೊಂಡು ಭೂ ಗಡಿಗಳನ್ನು ಪರಿಶೀಲನೆ ನಡೆಸಿದ್ದರು. ಇದರಲ್ಲಿ ಅಧಿಕಾರಿಗಳು ಪ್ರತಿಯೊಂದು ಸ್ಥಳಕ್ಕೆ ಭೌತಿಕವಾಗಿ ಭೇಟಿ ನೀಡಿ, ಅದರ ಗಡಿಗಳಲ್ಲಿ ನಡೆದುಕೊಂಡು ಹೋಗಿ ಛಾಯಾಚಿತ್ರಗಳು ಮತ್ತು ಕಿರು ವೀಡಿಯೊಗಳನ್ನು ಅಪ್‌ಲೋಡ್ ಮಾಡಬೇಕಾಗಿತ್ತು. ಈ ವ್ಯವಸ್ಥೆಯು ಕಚೇರಿಗಳಿಂದ ದತ್ತಾಂಶ ನಮೂದನ್ನು ತಡೆಯುತ್ತದೆ, ಇದು ಆನ್-ಗ್ರೌಂಡ್ ಪರಿಶೀಲನೆಯನ್ನು ಖಚಿತಪಡಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲ್ಯಾಂಡ್ ಬೀಟ್ ವ್ಯವಸ್ಥೆಯನ್ನು ಡಿಜಿಟಲ್ ಪರಿಶೀಲನೆಗಳು ಇತರ ನಿರ್ದಿಷ್ಟ ಕ್ರಮಗಳ ಮೂಲಕ ಶಿಸ್ತುಬದ್ಧವಾಗಿ ನಡೆಸುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಕೋಗಿಲು ಲೇಔಟ್:​ ಒತ್ತುವರಿ ಮಾಡಿಕೊಂಡಿದ್ದವರಲ್ಲಿ ಮುಸ್ಲಿಂ ಕುಟುಂಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ

ಹಿಂದೆ, ಕೆಲಸದ ಒತ್ತಡ ಮತ್ತು ಬಹು ಜವಾಬ್ದಾರಿಗಳಿಂದಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಭೂಮಿ ಪರಿಶೀಲನೆ ಕಾರ್ಯವನ್ನು ತಪ್ಪಿಸುತ್ತಿದ್ದರು. ಅದಕ್ಕಾಗಿ ಲ್ಯಾಂಡ್ ಬೀಟ್ ವ್ಯವಸ್ಥೆಯನ್ನು ತರಬೇಕಾಯಿತು ಎಂದೂ ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:49 am, Mon, 19 January 26

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್