ಸಕಲೇಶಪುರ ಬಳಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತ
ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದಾಗಿ ಪರ್ವತಗಳ ಸಾಲಿನಲ್ಲಿ ಭೂ ಕುಸಿತ ಶುರುವಾಗಿದೆ. ಇದೀಗ ಮತ್ತೆ ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಉಂಟಾಗಿದೆ. ಹಾಗಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ.
ಹಾಸನ, ಆಗಸ್ಟ್ 16: ಜಿಲ್ಲೆಯ ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತವಾಗಿದೆ (Landslide). ಹೀಗಾಗಿ ಬೆಂಗಳೂರು-ಮಂಗಳೂರು (Bangaluru-Mangaluru) ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ. ಆ ಮೂಲಕ ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಬಳಿಕ ಮಣ್ಣು ತೆರವು ಮಾಡಿ ರೈಲು ಸಂಚಾರ ಆರಂಭ ಬಳಿಕ ಇದೀಗ ಮತ್ತೆ ಮಣ್ಣು ಕುಸಿತವಾಗಿದೆ.
ಭೂಕುಸಿತದಿಂದಾಗಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲು ಕಳೆದ ಒಂದು ಗಂಟೆಯಿಂದ ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ರೈಲು ಸಂಚಾರ ಸ್ಥಗಿತವಾಗಿದ್ದರಿಂದ ನೂರಾರು ಪ್ರಯಾಣಿಕರು ಪರದಾಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ.
ಇದನ್ನೂ ಓದಿ: ಸಕಲೇಶಪುರ ಭೂಕುಸಿತ: ಬೆಂಗಳೂರು-ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಮತ್ತೆ ಸ್ಥಗಿತ
ಸಾಲು ಸಾಲು ಗುಡ್ಡ ಕುಸಿತದ ಪ್ರಕರಣಗಳು ಸಂಭವಿಸುತ್ತಿವೆ. ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದಾಗಿ ಪರ್ವತಗಳ ಸಾಲಿನಲ್ಲಿ ಭೂ ಕುಸಿತ ಶುರುವಾಗಿದೆ. ಸಕಲೇಶಪುರ-ಬಾಳ್ಳುಪೇಟೆ ರೈಲ್ವೆ ಮಾರ್ಗದಲ್ಲಿ ಮಧ್ಯರಾತ್ರಿ ಭೂ ಕುಸಿತವಾಗಿತ್ತು. ಪ್ರಯಾಣಿಕರು ಇಡೀ ರಾತ್ರಿ ಪರದಾಡಿದ್ದರು.
ಈ ಮುಂಚೆ ಭೂ ಕುಸಿತವಾದಾಗ ಒಟ್ಟು 6 ಕಡೆ ರೈಲು ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ, ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರ್ಡೇಶ್ವರ, ಆಲೂರು-ಹಾಸನ, ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಒಟ್ಟು 6 ಕಡೆಗಳಲ್ಲಿನ ರೈಲು ಸಂಚಾರದಲ್ಲಿ ವ್ಯತ್ಯಯ ಆಗಿತ್ತು.
ಇದನ್ನೂ ಓದಿ: ಭೂಕುಸಿತದಿಂದ ರದ್ದಾಗಿದ್ದ ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ
20 ದಿನಗಳಿಂದ ಪ್ಯಾಸೆಂಜರ್ ರೈಲು ಸಂಚಾರ ಬಂದ್ ಆಗಿತ್ತು. ಕೆಲ ದಿನಗಳ ಹಿಂದಷ್ಟೆ ಗೂಡ್ಸ್ ರೈಲು ಓಡಿಸುವ ಮೂಲಕ ರೈಲ್ವೆ ಇಲಾಖೆ ಹಳಿ ಚೆಕ್ ಮಾಡಿತ್ತು. ಬಳಿಕ ಹಾಸನ- ಮಂಗಳೂರು ನಡುವೆ ಬಂದ್ ಆಗಿದ್ದ ರೈಲು ಸಂಚಾರ ಪುನಾರಾರಂಭ ಮಾಡಲಾಗಿತ್ತು. ಎಡೆಕುಮರಿ ಬಳಿ ಸುಮಾರು 400ಕ್ಕೂ ಹೆಚ್ಚು ಸಿಬ್ಬಂದಿಗಳಿಂದ ಹಗಲಿರುಳು ಹಳಿ ದುರಸ್ತಿ ಕಾರ್ಯ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:05 pm, Fri, 16 August 24