ಭೂಕುಸಿತ: ಪಶ್ಚಿಮ ಘಟ್ಟದ ಧಾರಣ ಸಾಮರ್ಥ್ಯ ಅಧ್ಯಯನಕ್ಕೆ ಸಮಿತಿ ರಚನೆ, 3 ತಿಂಗಳಲ್ಲಿ ವರದಿ ಸಲ್ಲಿಕೆಗೆ ಸೂಚನೆ
ಪಶ್ಚಿಮ ಘಟ್ಟದಲ್ಲಿ ಹೆಚ್ಚುತ್ತಿರುವ ಯೋಜನೆಗಳು ಮತ್ತು ರಸ್ತೆ ನಿರ್ಮಾಣದಿಂದಾಗಿ ಪರಿಸರಕ್ಕೆ ಧಕ್ಕೆಯಾಗುತ್ತಿದೆ. ಭೂಕುಸಿತ, ಜೀವ ಹಾನಿ ಮತ್ತು ಜಲಕ್ಷಾಮದ ಆತಂಕದ ಹಿನ್ನೆಲೆಯಲ್ಲಿ, ಪಶ್ಚಿಮ ಘಟ್ಟದ ಕ್ಯಾರಿಂಗ್ ಸಾಮರ್ಥ್ಯ ಕುರಿತು ಅಧ್ಯಯನ ಮಾಡಲು ಸಮಿತಿಯನ್ನು ರಚಿಸಿದ್ದು, 3 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಬೆಂಗಳೂರು, ಜೂನ್ 01: ದಕ್ಷಿಣ ಕನ್ನಡ ಸೇರಿದಂತೆ ಕೊಡಗು ಭಾಗದಲ್ಲಿ ಮುಂಗಾರು ಪೂರ್ವ ಮಳೆಗೆ ಪ್ರವಾಹ, ಭೂಕುಸಿತ ಸಂಭವಿಸುತ್ತಿರುವ ಹಿನ್ನೆಲೆ ಪಶ್ಚಿಮ ಘಟ್ಟದ (Western Ghats) ಧಾರಣ ಸಾಮರ್ಥ್ಯ ಅಧ್ಯಯನಕ್ಕೆ ಸಮಿತಿ ರಚನೆ ರಚಿಸಲಾಗಿದ್ದು, ಮೂರು ತಿಂಗಳ ಒಳಗಾಗಿ ಸಮಗ್ರ ವರದಿಯನ್ನು ಕಡತದಲ್ಲಿ ಸಲ್ಲಿಸುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ, ಅರಣ್ಯ ಖಾತೆ ಸಚಿವ ಈಶ್ವರ್ ಖಂಡ್ರೆ (Eshwar Khandre) ಸೂಚಿಸಿದ್ದಾರೆ.
ಆದೇಶದಲ್ಲೇನಿದೆ?
ಕರ್ನಾಟಕದ ಅರಣ್ಯಗಳ ಪೈಕಿ ಶೇ.60ರಷ್ಟು ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟ ಪ್ರದೇಶದಲ್ಲಿದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕಲು, ಕೀಟ ಸಂಕುಲಗಳ ನೆಲೆವೀಡಾಗಿದೆ. ಮಿಗಿಲಾಗಿ ಮಾರುತಗಳನ್ನು ತಡೆದು ದೇಶಾದ್ಯಂತ ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಗುಡ್ಡಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ: ಅಧಿಕಾರಿಗಳೇ ಹೊಣೆ, ಠಾಣೆಗೆ ದೂರು
ಇಂತಹ ಮಹತ್ವದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಲವು ರಸ್ತೆಗಳು, ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಪಶ್ಚಿಮಘಟ್ಟ ಅಪಾಯಕ್ಕೆ ಸಿಲುಕಿ, ಭೂಕುಸಿತಗಳು ಸಂಭವಿಸುತ್ತಿದೆ. ಇದರಿಂದ ಅಮೂಲ್ಯ ಜೀವಹಾನಿ, ಆಸ್ತಿ ಹಾನಿ ಹಾಗೂ ಬೆಳೆ ಹಾನಿ ಸಂಭವಿಸುತ್ತಿದ್ದು, ಸಸ್ಯಸಂಕುಲ, ಪ್ರಾಣಿಸಂಕುಲಕ್ಕೂ ಸಂಕಷ್ಟ ಎದುರಾಗಿರುವುದರ ಜೊತೆಗೆ ಮುಂಬರುವ ದಿನಗಳಲ್ಲಿ ರಾಜ್ಯಕ್ಕೆ ತೀವ್ರ ಜಲ ಕ್ಷಾಮ ಎದುರಾಗುವ ಭೀತಿ ಇದೆ ಎಂದು ಪರಿಸರ ತಜ್ಞರು, ವಿಜ್ಞಾನಿಗಳು ಹಾಗೂ ಪರಿಸರ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು: ನೆಮ್ಮದಿಯಾಗಿ ಮನೆಯಲ್ಲಿ ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಾಲ್ವರ ರಕ್ಷಣೆ
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಪಶ್ಚಿಮಘಟ್ಟದ ತಾಳಿಕೊಳ್ಳುವ (ಧಾರಣ) ಸಾಮರ್ಥ್ಯ ಅಂದರ Carrying Capacity ಕುರಿತಂತೆ ಅಧ್ಯಯನ ಕೈಗೊಂಡು 3 ತಿಂಗಳ ಒಳಗಾಗಿ ಸಮಗ್ರ ವರದಿಯನ್ನು ಕಡತದಲ್ಲಿ ಸಲ್ಲಿಸಲು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ, ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಕ್ಷಣ ಕ್ಷಣಕ್ಕೂ ಬದಲಾಗುವ ಚಾರ್ಮಾಡಿ ಘಾಟ್ ವಾತಾವರಣ
ಇನ್ನು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆರಾಯ ಕೊಂಚ ವಿರಾಮ ನೀಡಿದ್ದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ವಾತಾವರಣ ಕ್ಷಣ ಕ್ಷಣಕ್ಕೂ ಬದಲಾವಣೆಗೊಳ್ಳುತ್ತಿದೆ. ಇಂದು ಚಾರ್ಮಾಡಿ ಘಾಟ್ನಲ್ಲಿ ದಟ್ಟ ಮಂಜು ಕವಿದ ವಾತಾವರಣವಿತ್ತು. ಪರಿಣಾಮ ವಾಹನ ಸವಾರರು ತೀವ್ರ ಪರದಾಡುವಂತಾಯಿತು. ಘಾಟ್ನ ರಸ್ತೆಗಳ ಜಲಪಾತಗಳ ಬಳಿ ಪ್ರವಾಸಿಗರ ಮೋಜು ಮಸ್ತಿ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:00 pm, Sun, 1 June 25








