ಚಾರ್‌ ಧಾಮ್​ನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ ಹಾವೇರಿಯ 7 ಜನರು

ಕಳೆದ ತಿಂಗಳು ಜೂನ್ 29 ರಂದು ಚಾರಧಾಮ್ ಯಾತ್ರೆಗೆ ತೆರಳಿದ್ದ ಹಾವೇರಿ ಜಿಲ್ಲೆಯ 7 ಜನರ ತಂಡ ಸದ್ಯ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತರಾಖಂಡದ ಚೆಮೋಲಿ ಜಿಲ್ಲೆಯ ಜ್ಯೋಶಿಮಠ ಎಂಬ ಗ್ರಾಮದ ಬಳಿ ಭೂ ಕುಸಿತ ಉಂಟಾಗಿದೆ. ಚಾರ್‌ ಧಾಮ್​ ಯಾತ್ರೆಗೆ ತೆರಳಿರುವ ಹಾವೇರಿ ಜಿಲ್ಲೆಯ 7 ಜನರ ತಂಡ ಸಿಲುಕಿಕೊಂಡಿದ್ದಾರೆ.

ಚಾರ್‌ ಧಾಮ್​ನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ ಹಾವೇರಿಯ 7 ಜನರು
ಚಾರ್‌ ಧಾಮ್​ನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ ಹಾವೇರಿಯ 7 ಜನರು
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 11, 2024 | 10:13 PM

ಹಾವೇರಿ, ಜುಲೈ 11: ಚಾರಧಾಮ್ (CharDham) ಯಾತ್ರೆಗೆ ತೆರಳಿರುವ ಹಾವೇರಿ ಜಿಲ್ಲೆಯ 7 ಜನರ ತಂಡ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವಂತಹ ಘಟನೆ ನಡೆದಿದೆ. ಉತ್ತರಾಖಂಡದ ಚೆಮೋಲಿ ಜಿಲ್ಲೆಯ ಜ್ಯೋಶಿಮಠ ಎಂಬ ಗ್ರಾಮದ ಬಳಿ ಭೂಕುಸಿತ (Landslide) ಉಂಟಾಗಿದೆ. ಬದ್ರಿನಾಥ್ ದರ್ಶನ ಮುಗಿಸಿ ವಾಪಾಸ್ ಆಗುತ್ತಿದ್ದಾಗ ದುರಂತ ಸಂಭವಿಸಿದೆ. ಈ ವೇಳೆ ಜಿಲ್ಲೆಯ ಚಿಕ್ಕೇರೂರು ಹಾಗೂ ತಿಳವಳ್ಳಿ ಗ್ರಾಮದ 7 ಜನರು ಕೂಡ ಪರಸ್ಪರ ಸಂಬಂಧಿಕರಾಗಿದ್ದಾರೆ.

ಶ್ರೀಧರ್​ ಎಂ ಹೊಳಲ್ಕೇರಿ‌ (62), ಶಾಂತಾ ಎಸ್ ಹೊಳಲ್ಕೇರಿ (57), ಅಶೋಕ್ ಎಸ್ .ವಿ (61), ಭಾರತಿ ಎ.ಎಸ್ (55), ವೆಂಕಟೇಶ್ ಪಂಪನ್ (62), ರಾಜೇಶ್ವರಿ ಪಂಪನ್ (60) ಮತ್ತು ರಾಹುಲ್ ಪಂಪನ್ (35) ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು.

ಇದನ್ನೂ ಓದಿ: ಹಾವೇರಿ: ಲೇಡಿ ಕಂಡಕ್ಟರ್, ಡ್ರೈವರ್​ಗಳಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ಬಸ್‌ ತಡೆದು ABVP ನೇತೃತ್ವದಲ್ಲಿ ಪ್ರತಿಭಟನೆ

ಕಳೆದ ತಿಂಗಳು ಜೂನ್ 29 ರಂದು ಚಾರಧಾಮ್ ಯಾತ್ರೆಗೆ 7 ಜನರ ತಂಡ ತೆರಳಿದೆ. ನಾಳೆ ವಾಪಸ್​ ಹಾವೇರಿಗೆ ವಿಮಾನ ಬುಕ್​ ಬುಕ್ ಆಗಿತ್ತು. ಆದರೆ ಅಷ್ಟರಲ್ಲಿ ದುರಂತ ಸಂಭವಿಸಿದೆ.

ರಾಜ್ಯ ಸರ್ಕಾರಕ್ಕೆ ಮನವಿ 

7 ಜನರ ತಂಡದ ಪೈಕಿ ಓರ್ವವು ವಿಡಿಯೋ ಬೈಟ್​ ನೀಡಿದ್ದು, ನಾವು ಮೂರು ದಿನದಿಂದ ಉತ್ತರಾಖಂಡದಲ್ಲಿ ಸಿಲುಕಿಕೊಂಡಿದ್ದೇವೆ. ಹಾಗಾಗಿ ನಮ್ಮನ್ನು ರಕ್ಷಣೆ ಮಾಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಡೆಂಗ್ಯೂ ಮರಣ ಮೃದಂಗ; ಹಾವೇರಿ ಜಿಲ್ಲೆಯಲ್ಲಿ ಡೆಂಘೀಗೆ 13 ವರ್ಷದ ಬಾಲಕ ಬಲಿ

ಉತ್ತರಾಖಂಡದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಅಬ್ಬರಿಸುತ್ತಿದೆ. ಹೀಗಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಸಾಮಾನ್ಯ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆ ಸರ್ಕಾರ ಚಾರ್ ಧಾಮ್ ಯಾತ್ರೆಯನ್ನು ಎರಡು ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಭೂಕುಸಿತದ ಮುನ್ಸೂಚನೆ ನೀಡಲಾಗಿದೆ. ಕೆಲ ಪ್ರದೇಶಗಳಲ್ಲಿನ ನಿವಾಸಿಗಳು ಮನೆಯೊಳಗೆ ಇರುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:01 pm, Thu, 11 July 24

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್