ಸಿಗಂಧೂರೇಶ್ವರಿ ದೇವಾಲಯಕ್ಕೆ ಹೋಗುವ ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್ಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡು, ಭಾರಿ ಅನಾಹುತ ತಪ್ಪಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶರಾವತಿ ನದಿಯ ಹಿನ್ನೀರಿನಲ್ಲಿ ಈ ಘಟನೆ ಸಂಭವಿಸಿದೆ. ಲಾಂಜ್ಗಳನ್ನು ಮಂಜುನಾಥ ಮತ್ತು ಸುನಿಲ್ ಎಂಬುವವರು ಚಲಾಯಿಸುತ್ತಿದ್ದರು. ಈ ಇಬ್ಬರು ಅನಧಿಕೃತ ಲಾಂಜ್ ಚಾಲಕರಾಗಿದ್ದರು ಎನ್ನಲಾಗಿದೆ. ಚಾಲಕರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನದಿ ದಡದಲ್ಲಿರುವ ಸಿಗಂಧೂರೇಶ್ವರಿ ದೇವಾಲಯಕ್ಕೆ ಎರಡೂ ಲಾಂಜ್ನಲ್ಲಿ ಸುಮಾರು 500ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಲಾಂಜ್ನಲ್ಲಿದ್ದ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಈ ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
Published On - 12:48 pm, Wed, 11 September 19