ಆಲೂರು ಗ್ರಾಮದ ಬಳಿ ಕಲ್ಲಿನ ಕ್ವಾರೆಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಸ್ಪೋಟಕಗಳ ವಶ
ಬಾಗಲಕೋಟೆಯಿಂದ ದಾವಣಗೆರೆಗೆ ಅಕ್ರಮವಾಗಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಪಾರ ಪ್ರಮಾಣದ ಸ್ಟೋಟಕ ಸಾಗಾಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಐಜಿ ಸ್ಕ್ವಾಡ್ ನ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಆಲೂರು ಗ್ರಾಮದ ಬಳಿ ಇರುವ ಕಲ್ಲಿನ ಕ್ವಾರೆಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಸ್ಪೋಟಕಗಳನ್ನು ಪೊಲೀಸರು ದಾಳಿ ನಡೆಸಿ, ವಶಪಡಿಸಿಕೊಂಡಿದ್ದಾರೆ. ಎರಡು ಬುಲೇರೋ ವಾಹನಗಳಲ್ಲಿ ಸಾಗಿಸುತ್ತಿದ್ದ 2,970 ಜಿಲೆಟಿನ್ ಜೆಲ್ ಗಳು, 790 ಎಲೆಕ್ಟ್ರಾನಿಕ್ ಡಿಟೋನೇಟರ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಪೂರ್ವ ವಲಯ ಐಜಿ ಸ್ಕ್ವಾಡ್ ದಾಳಿ ನಡೆಸಿತ್ತು.
ಬಾಗಲಕೋಟೆಯಿಂದ ದಾವಣಗೆರೆಗೆ ಅಕ್ರಮವಾಗಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಪಾರ ಪ್ರಮಾಣದ ಸ್ಟೋಟಕ ಸಾಗಾಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಐಜಿ ಸ್ಕ್ವಾಡ್ ನ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಇಬ್ಬರು ಚಾಲಕರು, ಸ್ಪೋಟಕಗಳನ್ನು ಕಳುಹಿಸಿಕೊಟ್ಟಿದ್ದ ಮಾಲೀಕರನ್ನು ಪೊಲೀಸರು ವಶಕ್ಕೆ ಪಡೆದರು. ಅಕ್ರಮ ಸ್ಪೋಟಕ ಸಾಗಿಸುತ್ತಿದ್ದ ಎರಡು ವಾಹನಗಳನ್ನು ಸ್ವಾಧೀನಕ್ಕೆ ತೆಗೆದುಕೊಂಡರು. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆಯಲ್ಲಿ ಕಲ್ಲಿನ ಕ್ವಾರಿ ಮೇಲೆ ಪೊಲೀಸರ ದಾಳಿ: ಸ್ಪೋಟಕ ವಸ್ತುಗಳು ಪತ್ತೆ
(large scale of illegal explosives confiscated by west range igp squad in davanagere taluk)