Chopper Factory: ತುಮಕೂರಿನಲ್ಲಿ ದೇಶದ ಅತಿದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ: ಸೋಮವಾರ ಪ್ರಧಾನಿಯಿಂದ ಉದ್ಘಾಟನೆ

Largest Helicopter Manufacturing Unit In Tumkur- ಗುಬ್ಬಿ ತಾಲೂಕಿನ ಬಿದರೆಹಳ್ಳಿ ಕಾವಲ್ ಪ್ರದೇಶದಲ್ಲಿ 615 ಎಕರೆ ಜಾಗದಲ್ಲಿ ಹೆಚ್​ಎಎಲ್​ನ ಹೆಲಿಕಾಪ್ಟರ್ ಫ್ಯಾಕ್ಟರಿ ನಿರ್ಮಾಣವಾಗಿದ್ದು, ಫೆಬ್ರುವರಿ 6ರಂದು ಪ್ರಧಾನಿ ಉದ್ಘಾಟನೆ ಮಾಡುತ್ತಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ.

Chopper Factory: ತುಮಕೂರಿನಲ್ಲಿ ದೇಶದ ಅತಿದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ: ಸೋಮವಾರ ಪ್ರಧಾನಿಯಿಂದ ಉದ್ಘಾಟನೆ
ತುಮಕೂರಿನಲ್ಲಿ ದೇಶದ ಅತಿದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 05, 2023 | 8:29 AM

ತುಮಕೂರು: ಹೆಚ್​​ಎಎಲ್​ನ ಬೃಹತ್ ಹೆಲಿಕಾಪ್ಟರ್ ತಯಾರಕಾ ಘಟಕವೊಂದನ್ನು (HAL Helicopter Factory) ಪ್ರಧಾನಿ ನರೇಂದ್ರ ಮೋದಿ ನಾಳೆ ಸೋಮವಾರ (ಫೆ. 6) ಉದ್ಘಾಟನೆ ಮಾಡಲಿದ್ದಾರೆ. ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್ ಎಂಬಲ್ಲಿ 615 ಎಕರೆ ಜಾಗದಲ್ಲಿ ಈ ಹೆಲಿಕಾಪ್ಟರ್ ಘಟಕ ನಿರ್ಮಾಣವಾಗಿದೆ. ಹೆಲಿಪ್ಯಾಡ್, ಫ್ಲೈಟ್ ಹ್ಯಾಂಗಾರ್, ಅಡ್ಮಿನ್ ಕಟ್ಟಡ ಸೇರಿ ಕೆಲವಾರು ಸೌಲಭ್ಯಗಳನ್ನು ಈಗ ನಿರ್ಮಿಸಲಾಗಿದೆ. ಸದ್ಯ ನಾಳೆಯಿಂದ ಮೊದಲ ಹಂತದ ಕಾರ್ಯಾಚರಣೆಗಳು ನಡೆಯುತ್ತವೆ ಎನ್ನಲಾಗಿದೆ.

2016ರಲ್ಲಿ ಪ್ರಧಾನಿಯವರೇ (PM Narendra Modi) ಈ ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಹೆಚ್​ಎಎಲ್ ಬಳಿ ಭಾರತೀಯ ಮಿಲಟರಿಗೆ ಯುದ್ಧ ಹೆಲಿಕಾಪ್ಟರ್ ನಿರ್ಮಿಸುವ ಬಹಳಷ್ಟು ಯೋಜನೆಗಳಿವೆ. ಬೆಂಗಳೂರಿನಲ್ಲಿರುವ ಹೆಚ್​ಎಲ್​ನ ಮುಖ್ಯ ತಯಾರಕಾ ಸಂಕೀರ್ಣ ಸಾಕಾಗದೇ ಇರುವುದರಿಂದ ತುಮಕೂರಿನಲ್ಲಿ ಹೊಸದಾದ ಬೃಹತ್ ಘಟಕ ನಿರ್ಮಿಸಲಾಗಿದೆ.

ತುಮಕೂರಿನ ಈ ಹೆಲಿಕಾಪ್ಟರ್ ಫ್ಯಾಕ್ಟರಿಯಲ್ಲಿ ಮೊದಲಿಗೆ ಲೈಟ್ ಯುಟಿಲಿಟಿ ಹೆಲಿಕಾಪ್ಟರುಗಳನ್ನು (LUH Copters) ತಯಾರಿಸಲಾಗುತ್ತದೆ. ನಂತರ ಲೈಟ್ ಕಾಂಬ್ಯಾಟ್ ಹೆಲಿಕಾಪ್ಟರುಗಳು (LCH) ಮತ್ತು ಮಲ್ಟಿರೋಲ್ ಹೆಲಿಕಾಪ್ಟರುಗಳನ್ನು (IMRH) ತಯಾರಿಸುವ ಯೋಜನೆ ಇದೆ.

ಇದನ್ನೂ ಓದಿ: Pakistan: ಕೈಯಲ್ಲಿ ಕುರಾನ್, ಅಣುಬಾಂಬ್; ಬಡತನ ನಿರ್ಮೂಲನೆಗೆ ಸೂತ್ರ ಕೊಟ್ಟ ಪಾಕ್ ಇಸ್ಲಾಮಿಕ್ ಮುಖಂಡ

ಮುಂದಿನ 20 ವರ್ಷದ ಕಾಲಾವಧಿಯಲ್ಲಿ 3-15 ಟನ್ ಶ್ರೇಣಿಯ ಒಂದು ಸಾವಿರಕ್ಕೂ ಹೆಚ್ಚು ಹೆಲಿಕಾಪ್ಟರುಗಳನ್ನು ಎಚ್​ಎಎಲ್ ತಯಾರಿಸಲಿದೆ. ಇದರ ಒಟ್ಟು ಮೌಲ್ಯ 4 ಲಕ್ಷ ಕೋಟಿ ರೂಗೂ ಹೆಚ್ಚು ಎನ್ನಲಾಗಿದೆ. ಈಗಾಗಲೇ ಒಂದು ಎಲ್​ಯುಎಚ್ ಹೆಲಿಕಾಪ್ಟರ್ ತಯಾರಿಸಲಾಗಿದ್ದು ಅದರ ಪರೀಕ್ಷೆಯೂ ಯಶಸ್ವಿಯಾಗಿ ಉದ್ಘಾಟನೆಗೆ ಅಣಿಯಾಗಿದೆ.

ತುಮಕೂರಿನ ಈ ಹೊಸ ಫ್ಯಾಕ್ಟರಿಯಲ್ಲಿ ಆರಂಭದಲ್ಲಿ ವರ್ಷಕ್ಕೆ 30 ಹೆಲಿಕಾಪ್ಟರ್​ಗಳನ್ನು ತಯಾರಿಸುವ ಉದ್ದೇಶ ಇದೆ. ನಂತರ ಹಂತ ಹಂತವಾಗಿ ಈ ಸಂಖ್ಯೆಯನ್ನು 90ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ರಕ್ಷಣಾ ಇಲಾಖೆ ಹೇಳಿದೆ.

ಇದನ್ನೂ ಓದಿ: Adani Row: ಮಾರುಕಟ್ಟೆ ನಿಯಂತ್ರಕಗಳು ತಮ್ಮ ಕೆಲಸ ಮಾಡಲಿವೆ; ಅದಾನಿ ಪ್ರಕರಣದ ಬಗ್ಗೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ

ಎಲ್​ಯುಎಚ್ ಅಗತ್ಯತೆ ಹೆಚ್ಚು

ಭಾರತೀಯ ವಾಯಪಡೆ ಬಳಿ ಈಗ ಚೀತಾ ಮತ್ತು ಚೇತಕ್ ಎಂಬೆರಡು ಮಾದರಿಯ ಹೆಲಿಕಾಪ್ಟರುಗಳಿವೆ. ಆದರೆ, ಇವುಗಳು ಹಳೆಯದಾಗಿದ್ದು, ಹೊಸ ತಂತ್ರಜ್ಞಾನದೊಂದಿಗೆ ತಯಾರಿಸಲಾಗಿರುವ ಲೈಟ್ ಯುಟಿಲಿಟಿ ಹೆಲಿಕಾಪ್ಟರುಗಳು ಈ ಚೀತಾ ಮತ್ತು ಚೇತಕ್ ಸ್ಥಾನಗಳನ್ನು ತುಂಬಲಿವೆ. ಒಮ್ಮೆ ಎಲ್​ಯುಎಚ್ ಕಾಪ್ಟರುಗಳು ತಕ್ಕ ಪ್ರಮಾಣದಲ್ಲಿ ನಿರ್ಮಾಣಗೊಂಡು ನಿಯೋಜನೆಗೊಂಡ ಬಳಿಕ ಚೀತಾ ಮತ್ತು ಚೇತಕ್ ಹೆಲಿಕಾಪ್ಟರುಗಳು ಕಾರ್ಯಾಚರಣೆ ನಿಲ್ಲಿಸಲಿವೆ. ಈ ಹಳೆಯ ಹೆಲಿಕಾಪ್ಟರುಗಳನ್ನು ಹೆಚ್​​ಎಎಲ್ ಸಂಸ್ಥೆಯೇ ನಿರ್ಮಿಸಿದ್ದು.

Published On - 8:29 am, Sun, 5 February 23

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ