
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ತನ್ನ ಕಬಂಧಬಾಹುವನ್ನು ಚಾಚುತ್ತಲೇ ಇದೆ. ಕರ್ನಾಟಕದಲ್ಲಿ ಇಂದು ಸಂಜೆ ವೇಳೆಗೆ ಹೊಸದಾಗಿ 29 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಇಂದು 19 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ 474 ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ 474 ಸೋಂಕಿತರ ಪೈಕಿ ಬೆಂಗಳೂರಿನಲ್ಲೇ 120ಕ್ಕೂ ಅಧಿಕ ಮಂದಿ ಸೋಂಕಿತರಿದ್ದಾರೆ. ಇದುವರೆಗೂ 150 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಈವರೆಗೆ 18 ಜನ ಬಲಿಯಾಗಿದ್ದಾರೆ.
ತಬ್ಲಿಘಿಗಳ ಸಂಪರ್ಕದಲ್ಲಿದ್ದ ಮತ್ತೊಬ್ಬರಿಗೆ ಅಟ್ಯಾಕ್:
ನಿನ್ನೆಯಷ್ಟೇ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ತಬ್ಲಿಘಿಗಳ ಸಂಪರ್ಕದಲ್ಲಿದ್ದ ಇಬ್ಬರಿಗೆ ಕೊರೊನಾ ಸೋಂಕು ತಗುಲಿತ್ತು. ಇದೀಗ ಮತ್ತೊಂದು ಕೊರೊನಾ ಕೇಸ್ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕಿತ 179ರ ಜೊತೆ ನಿಕಟ ಸಂಪರ್ಕದಲ್ಲಿದ್ದ 60ವರ್ಷದ ವೃದ್ಧನಿಗೆ ಕೊರೊನಾ ಅಟ್ಯಾಕ್ ಆಗಿದೆ. ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಮಳವಳ್ಳಿ ಪಟ್ಟಣದಲ್ಲೇ 14ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
Published On - 5:41 pm, Fri, 24 April 20