ತೀವ್ರ ಸ್ವರೂಪ ಪಡೆದ ಪ್ರತಿಭಟನೆ.. ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್‌, ಜಲಫಿರಂಗಿ ಪ್ರಯೋಗ

|

Updated on: Jan 26, 2021 | 12:53 PM

ದೆಹಲಿಯ ಗಾಜಿಪುರ ಗಡಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿಗೆ ತೆರಳಿದ್ದವರ ಮೇಲೆ ಅಶ್ರುವಾಯು ಪ್ರಯೋಗ ಮಾಡಲಾಗಿದೆ. ಕಿಸಾನ್ ಟ್ರ್ಯಾಕ್ಟರ್ ಪರೇಡ್‌ಗೆ ತೆರಳಿದ್ದ ರೈತರ ಮೇಲೆ ಮನಬಂದಂತೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

ತೀವ್ರ ಸ್ವರೂಪ ಪಡೆದ ಪ್ರತಿಭಟನೆ.. ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್‌, ಜಲಫಿರಂಗಿ ಪ್ರಯೋಗ
ದೆಹಲಿಯಲ್ಲಿ ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್‌, ಜಲಫಿರಂಗಿ ಪ್ರಯೋಗ
Follow us on

ಇಂದು ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಈ ನಡುವೆ ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಬೆಂಗಳೂರು ಮತ್ತು ದೆಹಲಿಯಲ್ಲಿ ರೈತರ ಬೃಹತ್ ರ‍್ಯಾಲಿ ನಡೆಯುತ್ತಿದೆ. ಈ ಬಗ್ಗೆ ಪೊಲೀಸರು ಸಹ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಆದರೆ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ. ಖಾಕಿ ಕೋಟೆಯನ್ನೂ ಭೇದಿಸಿ ರಾಜಧಾನಿ ನಗರದತ್ತ ರೈತರ ಟ್ರ್ಯಾಕ್ಟರ್ ನುಗ್ಗಿಸ್ತಿದ್ದಾರೆ. ವಿವಿಧ ರಾಜ್ಯಗಳಿಂದ ದೆಹಲಿಗೆ ಸಾವಿರಾರು ರೈತರು ಎಂಟ್ರಿ ಕೊಟ್ರೇ, ಇತ್ತ ಬೇರೆ ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ರೈತರು ಆಗಮಿಸಿ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ದೆಹಲಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗ
ದೆಹಲಿಯ ಗಾಜಿಪುರ ಗಡಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿಗೆ ತೆರಳಿದ್ದವರ ಮೇಲೆ ಅಶ್ರುವಾಯು ಪ್ರಯೋಗ ಮಾಡಲಾಗಿದೆ. ಕಿಸಾನ್ ಟ್ರ್ಯಾಕ್ಟರ್ ಪರೇಡ್‌ಗೆ ತೆರಳಿದ್ದ ರೈತರ ಮೇಲೆ ಮನಬಂದಂತೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕೆಲವೆಡೆ ಪೊಲೀಸರ ಬ್ಯಾರಿಕೇಡ್ ತಳ್ಳಿ ನುಗ್ಗಲು ರೈತರು ಯತ್ನಿಸುತ್ತಿದ್ದಾರೆ. ದೆಹಲಿಯ ಸಿಂಘು ಗಡಿಯಲ್ಲಿ ರೈತರ ಮೇಲೆ ಲಾಠಿಚಾರ್ಜ್‌ ಮಾಡಲಾಗುತ್ತಿದೆ. ಹಾಗೂ ಅಕ್ಷರಧಾಮ ಬಳಿ ರೈತರ ಮೇಲೆ ಜಲಫಿರಂಗಿ ಪ್ರಯೋಗ ಮಾಡಲಾಗುತ್ತಿದೆ.

ದೆಹಲಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ
ದೆಹಲಿ ಮುತ್ತಿಗೆಗೆ ಮಣ್ಣಿನ ಮಕ್ಕಳಾದ ರೈತರು ಸರ್ವಸನ್ನದ್ಧರಾಗಿಯೇ ಬಂದಂತೆ ಕಾಣುತ್ತಿದೆ. ಜೆಸಿಬಿ, ಟ್ರಕ್, ಕ್ರೇನ್, ಟ್ರ್ಯಾಕ್ಟರ್ ಮೂಲಕ ದೆಹಲಿಗೆ ಲಗ್ಗೆ ಇಟ್ಟಿದ್ದು ಬ್ಯಾರಿಕೇಡ್​ಗಳನ್ನು ಕಿತ್ತೆಸೆದು ಅನ್ನದಾತರು ಮುನ್ನುಗ್ಗುತ್ತಿದ್ದಾರೆ. ಲಕ್ಷಾಂತರ ಟ್ರ್ಯಾಕ್ಟರ್​ಗಳ ಮೂಲಕ ರೈತರು ದೆಹಲಿ ಚಲೋ ಮಾಡ್ತಿದ್ದು ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಮಾರಕಾಸ್ತ್ರ ಹಿಡಿದು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪೊಲೀಸರು
ದೆಹಲಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ತೀವ್ರ ಸ್ವರೂಪಕ್ಕೆ ತಿರುಗುತ್ತಿದ್ದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ರ್ಯಾಕ್ಟರ್ ಪರೇಡ್ ದೆಹಲಿಯ ಐಟಿಒನಲ್ಲಿರುವ ದೆಹಲಿ ಪೊಲೀಸ್ ಹೆಡ್ ಕ್ವಾರ್ಟರ್ಸ್ ತಲುಪಿದೆ. ಪೊಲೀಸರು ವಿಧಿಸಿದ್ದ ಷರತ್ತುಗಳನ್ನು ಮುರಿದು ಪ್ರತಿಭಟನಾ ನಿರತ ರೈತರು ದೊಣ್ಣೆ ಹಿಡಿದು ಬಂದಿದ್ದಾರೆ. ಮಾರಕಾಸ್ತ್ರ ಹಿಡಿದು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಕೆಲ ರೈತರು ಮತ್ತು ಪೊಲೀಸರು ಗಾಯಗೊಂಡಿದ್ದಾರೆ. ನಿಗದಿತ ಮಾರ್ಗದಲ್ಲಿ ಹೋಗದೇ ಪೊಲೀಸರು ವಿಧಿಸಿದ್ದ ಷರತ್ತುಗಳನ್ನು ರೈತರು ಉಲಂಘಿಸಿದ್ದಾರೆ. ಪೊಲೀಸ್ ವಾಹನವನ್ನೇ ಹತ್ತಿ ಪ್ರತಿಭಟನೆ ನಡೆಸುತ್ತಿದ್ದಾರೆ.

Published On - 12:10 pm, Tue, 26 January 21