ಪ್ರಯಾಣಿಕರ ಸುರಕ್ಷತೆಗಾಗಿ ಸಾರಿಗೆ ಬಸ್​ಗಳಿಗೆ ಎಐ ಟೆಕ್ನಾಲಜಿ ಅಳವಡಿಕೆ: ಡಿಸಿಎಂ ಸವದಿ

ವಾಹನದ ಸಮೀಪಕ್ಕೆ ಬಂದಾಗ ಅಥವಾ ಚಾಲಕ ನಿದ್ರಿಸುತ್ತಿರುವಾಗ ಶಬ್ದ ಮಾಡಿ ಎಚ್ಚರಿಸುತ್ತದೆ. ಜೊತೆಗೆ ಕಂಟ್ರೋಲ್ ರೂಮ್ಗೆ ಮಾಹಿತಿ ರವಾನೆ ಮಾಡುತ್ತದೆ ಇದರಿಂದಾಗಿ ಚಾಲಕ ಸದಾ ಜಾಗರೂಕತೆಯಿಂದ ಇರುವಂತೆ ಮಾಡುವುದರ ಜೊತೆಗೆ ಅಪಘಾತ ಮತ್ತು ಅನಾಹುತಗಳನ್ನು ತಪ್ಪಿಸುವಂತಹ ಕೆಲಸ ಈ ಟೆಕ್ನಾಲಜಿಗಳು ಮಾಡುತ್ತವೆ.

ಪ್ರಯಾಣಿಕರ ಸುರಕ್ಷತೆಗಾಗಿ ಸಾರಿಗೆ ಬಸ್​ಗಳಿಗೆ ಎಐ ಟೆಕ್ನಾಲಜಿ ಅಳವಡಿಕೆ: ಡಿಸಿಎಂ ಸವದಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Jun 10, 2021 | 8:52 AM

ರಾಯಚೂರು: ಸಾರ್ವಜನಿಕ ಸಾರಿಗೆಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್​ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮೊದಲ ಬಾರಿಗೆ ಎಐ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಟೆಕ್ನಾಲಜಿ ಅಳವಡಿಸುವ ಮಹತ್ವದ ಯೋಜನೆಗೆ ಹೆಜ್ಜೆ ಇಡಲಾಗಿದೆ. ಕೆಲವು ಮುಂದುವರಿದ ರಾಷ್ಟ್ರಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದರೂ ನಮ್ಮ ಸರ್ಕಾರಿ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ವಿನೂತನ ಪ್ರಯೋಗ ಎನ್ನಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ರಾಯಚೂರಿನಲ್ಲಿ ತಿಳಿಸಿದ್ದಾರೆ.

ಸಿಡಬ್ಲ್ಯುಎಸ್ ಮತ್ತು ಡಿಡಿಎಸ್ ಟೆಕ್ನಾಲಜಿ ಸಿಡಬ್ಲ್ಯುಎಸ್ ಎಂದರೆ ಕೊಲಿಜಿಯನ್ ವಾರ್ನಿಂಗ್ ಸಿಸ್ಟಮ್. ಡಿಡಿಎಸ್ ಎಂದರೆ ಡ್ರೈವರ್ ಡ್ರೋಜಿನೆಸ್ ಡಿಟೆಕ್ಷನ್ ಸಿಸ್ಟಮ್. ಈ ಎರಡು ಟೆಕ್ನಾಲಜಿಗಳನ್ನು ವಾಹನಗಳಲ್ಲಿ ಅಳವಡಿಸಲಾಗುವುದು. ಇದರಿಂದ ನಮ್ಮ ಬಸ್ಸಿನ ಸಮೀಪಕ್ಕೆ ಬರುವ ಇತರೆ ವಾಹನಗಳು ಹಾಗೂ ಚಾಲಕ ನಿದ್ರಿಸಿ ಡಿವೈಡರ್ ಕಡೆ ಹೋಗುವುದನ್ನು ಮತ್ತು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಂತಹ ಟೆಕ್ನಾಲಜಿ ಇದಾಗಿದೆ.

ವಾಹನದ ಸಮೀಪಕ್ಕೆ ಬಂದಾಗ ಅಥವಾ ಚಾಲಕ ನಿದ್ರಿಸುತ್ತಿರುವಾಗ ಶಬ್ದ ಮಾಡಿ ಎಚ್ಚರಿಸುತ್ತದೆ. ಜೊತೆಗೆ ಕಂಟ್ರೋಲ್ ರೂಮ್ಗೆ ಮಾಹಿತಿ ರವಾನೆ ಮಾಡುತ್ತದೆ ಇದರಿಂದಾಗಿ ಚಾಲಕ ಸದಾ ಜಾಗರೂಕತೆಯಿಂದ ಇರುವಂತೆ ಮಾಡುವುದರ ಜೊತೆಗೆ ಅಪಘಾತ ಮತ್ತು ಅನಾಹುತಗಳನ್ನು ತಪ್ಪಿಸುವಂತಹ ಕೆಲಸ ಈ ಟೆಕ್ನಾಲಜಿಗಳು ಮಾಡುತ್ತವೆ.

ನಮಗೆ ನಮ್ಮ ಜನರ ಜೀವ ಮುಖ್ಯ. ಇದರಿಂದಾಗಿ ಅಪಘಾತ ರಹಿತ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಟೆಕ್ನಾಲಜಿಗಳನ್ನು ಕರಾರಸಾ ನಿಗಮದ 1,044 ಬಸ್ಸುಗಳಿಗೆ ಮೊದಲು ಅಳವಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ವಾಹನಗಳಿಗೆ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತನೆ ಮಾಡಿದೆ.

ಇದನ್ನೂ ಓದಿ

Amazon One: ಅಂಗೈ ತೋರಿಸಿ ಏನನ್ನಾದರೂ ಖರೀದಿಸುವ ಅವಕಾಶ; ಹಬ್ಬುತ್ತಿದೆ ಹೊಸ ಅಮೆಜಾನ್ ಒನ್ ಟೆಕ್ನಾಲಜಿ

ಪ್ರಧಾನಿ ಮೋದಿಗೆ ಗಡ್ಡ ತೆಗೆಸಲು 100 ರೂಪಾಯಿ ಮನಿ ಆರ್ಡರ್​ ಕಳುಹಿಸಿ ಪತ್ರ ಬರೆದ ಚಾಯ್​ವಾಲಾ

(Lakshmana Sawadi said AI technology will be implemented for transport buses for passenger safety)

Published On - 8:45 am, Thu, 10 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್