AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ರೆ ವಿಷ ಕುಡಿಯಲು ಹಣವಿಲ್ಲ ಅಂದಿದ್ರು: ಸವದಿ ಕಿಡಿ

ಲೋಕಸಭಾ ಚುನಾವಣೆ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಿವಣಗಿ ಹಾಲ್​​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತರ ಪೂರ್ವಭಾವಿ ಸಭೆ ಮಾಡಲಾಗಿದೆ. ಸಭೆಯಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ನನಗೆ ವಿಷ ಕುಡಿಯಲೂ ಹಣವಿಲ್ಲ, ನಿನಗೆ ಎಲ್ಲಿಂದ ಅನುದಾನ ಕೊಡಲಿ ಎಂದು ಯಡಿಯೂರಪ್ಪ ಹೇಳಿದ ಮಾತನ್ನು ಹೇಳಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ರೆ ವಿಷ ಕುಡಿಯಲು ಹಣವಿಲ್ಲ ಅಂದಿದ್ರು: ಸವದಿ ಕಿಡಿ
ಯಡಿಯೂರಪ್ಪ, ಶಾಸಕ ಲಕ್ಷ್ಮಣ ಸವದಿ
ಸಹದೇವ್​ ಮಾನೆ
| Edited By: |

Updated on:Mar 25, 2024 | 2:56 PM

Share

ಚಿಕ್ಕೋಡಿ, ಮಾರ್ಚ್​​ 25: ಬಿಎಸ್​​ ಯಡಿಯೂರಪ್ಪ (BS Yediyurappa) ಸಿಎಂ ಆಗಿದ್ದಾಗ ಅನುದಾನ ಕೇಳಿದ್ದೆ. ನನಗೆ ವಿಷ ಕುಡಿಯಲೂ ಹಣವಿಲ್ಲ, ನಿನಗೆ ಎಲ್ಲಿಂದ ಅನುದಾನ ಕೊಡಲಿ ಎಂದಿದ್ದರು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಎಸ್​ ಯಡಿಯೂರಪ್ಪ ಮತ್ತು ಈಶ್ವರಪ್ಪ ರಾಜ್ಯದಲ್ಲಿ ಬಿಜೆಪಿ ಬಲಪಡಿಸಿದರು. ಆದರೆ, K.S.ಈಶ್ವರಪ್ಪ ಮಗನಿಗೆ ಟಿಕೆಟ್ ನೀಡಲಿಲ್ಲ. ಜಗದೀಶ್​​ ಶೆಟ್ಟರ್‌ಗೆ ಮೊದಲು ಬಾಲ ಕಟ್ ಮಾಡಿದರು. ಈಗೀಗ ಜಗದೀಶ್​ ಶೆಟ್ಟರ್​ ಬಾಲ ಮತ್ತೆ ಚಿಗುರುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಚುನಾವಣಾ ಕೆಲಸ ಅಥಣಿಯಿಂದ ಆರಂಭಿಸಿದರೆ ಗೆಲುವು ಸಿಗುತ್ತೆ ಎಂಬ ನಂಬಿಕೆ

ಎರಡು ದಿನಗಳ ಹಿಂದೆ ಸಚಿವರು ಪೂರ್ವಭಾವಿ ಸಭೆ ಮಾಡೋಣ. ಶಿವಯೋಗಿ ನಾಡು ಅಥಣಿಯಿಂದ ಪ್ರಚಾರ ಆರಂಭಿಸೋಣ ಎಂದು ಹೇಳಿದ್ದರು. ಯಾವುದೇ ಪಕ್ಷ ಮೊದಲ ಸಭೆ ಅಥಣಿಯಿಂದ ಆರಂಭಿಸಿದರೆ ಅವರಿಗೆ ಚುನಾವಣೆಯಲ್ಲಿ ಗೆಲುವು ಸಿಗುತ್ತೆ ಎನ್ನುವುದು ನಂಬಿಕೆ. ಈಶಾನ್ಯ ದಿಕ್ಕಿನಿಂದ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ ಎಂದರು.

ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನನ್ನು​ ಗೆಲ್ಲಿಸುವ ಹೊಣೆ ಜಾರಕಿಹೊಳಿಗೆ, ಪ್ರಿಯಾಂಕಾರನ್ನ ಗೆಲ್ಲಿಸುವ ಜವಾಬ್ದಾರಿ ಹೆಬ್ಬಾಳ್ಕರ್​ಗೆ !

ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಚುನಾವಣೆಯ ತಂತ್ರ ಪ್ರತಿತಂತ್ರಗಳನ್ನ ರೂಪಿಸಬೇಕು. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು. ಪ್ರತಿಯೊಂದು ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕೆಲಸಗಳನ್ನ ಜನರಿಗೆ ತಲುಪಿಸಬೇಕು. ಸಿಎಂ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನ ಜಾರಿಗೆ ತಂದಿದ್ದಾರೆ. ಪಂಚ ಗ್ಯಾರಂಟಿಗಳಿಗೆ 55 ಸಾವಿರ ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್; ಪ್ರಚಾರಕ್ಕೆ ಹೋಗುತ್ತೇನೆ ಎಂದ ಮಂಗಳಾ ಅಂಗಡಿ

ಅಥಣಿ ಪೂರ್ವಭಾಗದ ಜನರು ಬರಗಾಲದಿಂದ ಬಳಲುತ್ತಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ನೀರಾವರಿ ಯೋಜನೆಗೆ ಚಾಲನೆ ನೀಡಿ, ನೀರಿನ ಬರ ನೀಗಿಸಿದ್ದಾರೆ. ಅಥಣಿ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನ ನೀಡಿದೆ. ಹಲವಾರು ಯೋಜನೆಗಳಿಗೆ ಕೋಟ್ಯಂತರ ಅನುದಾನ ನೀಡಿದ್ದಾರೆ ಎಂದರು.

ಪುತ್ರಿ ಪ್ರಿಯಾಂಕಾ ಪರ ಸತೀಶ್ ಜಾರಕಿಹೊಳಿ ಮನವಿ

ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ದೇಶಕ್ಕೆ ಕಾಂಗ್ರೆಸ್ ಪಕ್ಷ ಹಲವು ಕೊಡುಗೆಗಳನ್ನು ನೀಡಿದೆ. ಆರ್ಥಿಕ ಸಬಲೀಕರಣಕ್ಕಾಗಿ ಕಾಂಗ್ರೆಸ್​ 5 ಗ್ಯಾರಂಟಿಗಳನ್ನು ನೀಡಿದೆ. ಕೊವಿಡ್​​, ಪ್ರವಾಹದ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಪುತ್ರಿ ಪ್ರಿಯಾಂಕಾ ಪರ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:55 pm, Mon, 25 March 24

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ