ಸಾರಿಗೆ ನೌಕರರ ಜೊತೆಗಿನ ಸರ್ಕಾರದ ಸಂಧಾನ ಸಕ್ಸಸ್​: ನಾಳೆಯಿಂದ ಬಸ್​ ರೈಟ್​.. ರೈಟ್​!

ಸಾರಿಗೆ ನೌಕರರ ಜೊತೆಗಿನ ಸರ್ಕಾರದ ಸಂಧಾನ ಸಭೆ ಸಕ್ಸಸ್ ಆಗಿದೆ. ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಮುಷ್ಕರ ವಿಚಾರವಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಭೆ ಯಶಸ್ವಿಯಾಗಿದೆ.

ಸಾರಿಗೆ ನೌಕರರ ಜೊತೆಗಿನ ಸರ್ಕಾರದ ಸಂಧಾನ ಸಕ್ಸಸ್​: ನಾಳೆಯಿಂದ ಬಸ್​ ರೈಟ್​.. ರೈಟ್​!
ಸಾರಿಗೆ ಸಚಿವ ಲಕ್ಷ್ಮಣ ಸವದಿ
Follow us
KUSHAL V
|

Updated on:Dec 13, 2020 | 6:56 PM

ಬೆಂಗಳೂರು: ಸಾರಿಗೆ ನೌಕರರ ಜೊತೆಗಿನ ಸರ್ಕಾರದ ಸಂಧಾನ ಸಭೆ ಸಕ್ಸಸ್ ಆಗಿದೆ. ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಮುಷ್ಕರ ವಿಚಾರವಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಭೆ ಯಶಸ್ವಿಯಾಗಿದೆ.

ಸಾರಿಗೆ ಯೂನಿಯನ್‌ಗಳ ಮುಖಂಡರ ಜೊತೆ ನಡೆದ ಸಭೆ ಯಶಸ್ವಿಯಾಗಿದ್ದು ಈ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆಯುವುದಾಗಿ ಮುಖಂಡರಿಂದ ಘೋಷಣೆಯಾಗಿದೆ. ಹಾಗಾಗಿ, ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗುವುದಾಗಿ ಘೋಷಿಸಿದ್ದಾರೆ.ಈ ಮೂಲಕ ಮೂರು ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಸಮರಕ್ಕೆ ಸುಖಾಂತ್ಯ ಸಿಕ್ಕಿದೆ. ಇಂದು ರಾತ್ರಿಯಿಂದಲೇ ಎಲ್ಲಾ ಸರ್ಕಾರಿ ಬಸ್​ ಸಂಚಾರ ಪ್ರಾರಂಭವಾಗಲಿದೆ. ಎಲ್ಲಾ ಸರ್ಕಾರಿ ಬಸ್​ಗಳನ್ನು​ ರಸ್ತೆಗೆ ಇಳಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಈ ಕುರಿತು ಮಾತನಾಡಿದ KSRTC ಸಂಘದ ರಾಜ್ಯಾಧ್ಯಕ್ಷ ಚಂದ್ರು ಮುಷ್ಕರ ಕೈಬಿಡುವ ಬಗ್ಗೆ ಫ್ರೀಡಂಪಾರ್ಕ್​ನಲ್ಲಿ ಘೋಷಣೆ ಮಾಡುತ್ತೇವೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸರ್ಕಾರಿ ನೌಕರರಾಗಿ ಪರಿಗಣನೆ ಮಾಡುವ ಬಗ್ಗೆ ಮುಂದಿನ ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಕೊವಿಡ್​ ಸಂಕಷ್ಟದ ಹಿನ್ನೆಲೆಯಲ್ಲಿ ಮುಂದಿನ ದಿನದಲ್ಲಿ ಈ ಕುರಿತು ಸರ್ಕಾರ ನಿರ್ಧರಿಸುವ ಭರವಸೆ ನಮಗೆ ನೀಡಿದ್ದಾರೆ ಎಂದು ಚಂದ್ರು ಹೇಳಿದರು. ಜೊತೆಗೆ, ನಾಟ್​ ಇಶ್ಯೂಡ್​ ನಾಟ್​ ಕಲೆಕ್ಟೆಡ್​ ಸಹ ರದ್ದು ಮಾಡಲಾಗಿದೆ ಎಂದು ಸಹ ಹೇಳಿದರು.

ಇದಾದ ಬಳಿಕ ವಿಕಾಸಸೌಧದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸುದ್ದಿಗೋಷ್ಠಿ ನಡೆಸಿ ನಿಗಮದ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುವುದು. ಕೊವಿಡ್​ನಿಂದ ಮೃತ ನೌಕರರ ಕುಟುಂಬಕ್ಕೆ 30 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ, ಅಂತರ್ ನಿಗಮ ವರ್ಗಾವಣೆ ಬಗ್ಗೆ ಸಮಿತಿ ರಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

‘ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಸಾಧ್ಯವೇ ಇಲ್ಲ’ ಓಟಿ, ಭತ್ಯೆ ಮತ್ತೆ ಜನವರಿ ನಂತರ ಪ್ರಾರಂಭಿಸುತ್ತೇವೆ. ಜೊತೆಗೆ, ನೌಕರರಿಗೆ ಕಿರುಕುಳ ತಡೆಯಲು ಸಮಿತಿ ರಚಿಸುತ್ತೇವೆ. 2020ರ ಜನವರಿಯಿಂದ ವೇತನ ಪರಿಷ್ಕರಣೆ ಆಗದ ಹಿನ್ನೆಲೆಯಲ್ಲಿ 6ನೇ ವೇತನ ಆಯೋಗ ಜಾರಿ ಬಗ್ಗೆಯೂ ಮನವಿ ಮಾಡಿದ್ದಾರೆ. ಸರ್ಕಾರದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾದ ಬಳಿಕ ಪರಿಷ್ಕರಣೆ ಮಾಡುತ್ತೇವೆ ಎಂದು ಸವದಿ ಹೇಳಿದರು.

ಸಾರಿಗೆ ನೌಕರರು 10ರಿಂದ 12 ಬೇಡಿಕೆ ಮುಂದಿಟ್ಟಿದ್ದರು. ಆದರೆ, ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಸಾಧ್ಯವೇ ಇಲ್ಲ. ರಾಜ್ಯದಲ್ಲಿ 50 ನಿಗಮಗಳಿವೆ ಹಾಗಾಗಿ ಇದು ಸಾಧ್ಯವೇ ಇಲ್ಲ. ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಸಾಧ್ಯವೇ ಇಲ್ಲ ಎಂದು ಸವದಿ ಹೇಳಿದರು. ತರಬೇತಿ ನೌಕರರ ತರಬೇತಿ ಅವಧಿ 2ರಿಂದ 1 ವರ್ಷಕ್ಕೆ ಇಳಿಕೆ ಮಾಡುತ್ತೇವೆ. ಜೊತೆಗೆ, ನಿಗಮದಲ್ಲಿ ಮಾನವ ಸಂಪನ್ಮೂಲ ವ್ಯವಸ್ಥೆ ಜಾರಿಗೊಳಿಸುತ್ತೇವೆ ಎಂದು ಸವದಿ ತಿಳಿಸಿದರು.

ಫ್ರೀಡಂ ಪಾರ್ಕ್​ನಲ್ಲಿ ಸಾರಿಗೆ ನೌಕರರ ಹರ್ಷೋದ್ಗಾರ: ಮೊಬೈಲ್ ಟಾರ್ಚ್ ಆನ್ ಮಾಡಿ ಸಂತಸ ವ್ಯಕ್ತ

Published On - 6:06 pm, Sun, 13 December 20

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ