ಅಥಣಿಯಲ್ಲಿ ಬಿಜೆಪಿಗೆ ಲೀಡ್​: ಜಾರಕಿಹೊಳಿ ಆರೋಪಕ್ಕೆ ಸ್ಪಷ್ಟನೆ ನೀಡಿದ ಲಕ್ಷ್ಮಣ ಸವದಿ

| Updated By: ಗಂಗಾಧರ​ ಬ. ಸಾಬೋಜಿ

Updated on: Jun 10, 2024 | 5:14 PM

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಬರುವುದಕ್ಕೆ ಹಲವು ಕಾರಣಗಳಿವೆ. 2018ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿದ್ದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 36,000 ಮತ ಲೀಡ್​ ಸಿಕ್ಕಿತ್ತು. ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಾರಂಪರಿಕ ಮತಗಳು ಇರುತ್ತವೆ ಎಂದಿದ್ದಾರೆ.

ಅಥಣಿಯಲ್ಲಿ ಬಿಜೆಪಿಗೆ ಲೀಡ್​: ಜಾರಕಿಹೊಳಿ ಆರೋಪಕ್ಕೆ ಸ್ಪಷ್ಟನೆ ನೀಡಿದ ಲಕ್ಷ್ಮಣ ಸವದಿ
ಅಥಣಿಯಲ್ಲಿ ಬಿಜೆಪಿಗೆ ಲೀಡ್​: ಜಾರಕಿಹೊಳಿ ಆರೋಪಕ್ಕೆ ಸ್ಪಷ್ಟನೆ ನೀಡಿದ ಲಕ್ಷ್ಮಣ ಸವದಿ
Follow us on

ಬಾಗಲಕೋಟೆ, ಜೂನ್​ 10: ಲೋಕಸಭೆ ಚುನಾವಣೆ ವಿಚಾರವಾಗಿ ಶಾಸಕ ಲಕ್ಷ್ಮಣ್ (Laxman Savadi) ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಅಥಣಿಯಲ್ಲಿ ಬಿಜೆಪಿಗೆ ಹೆಚ್ಚು ಮತ ಬಂದಿದ್ದಕ್ಕೆ ವಾಗ್ದಾಳಿ ನಡೆಸಿದ್ದರು. ​ ಸತೀಶ್ ಜಾರಕಿಹೊಳಿ ಆರೋಪಕ್ಕೆ ಇದೀಗ ಮೌನ ಮುರಿದಿರುವ ಶಾಸಕ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಬರುವುದಕ್ಕೆ ಹಲವು ಕಾರಣಗಳಿವೆ ಎಂದು ಹೇಳಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿದ್ದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 36,000 ಮತಗಳು ಬಿಜೆಪಿ ಪಕ್ಷಕ್ಕೆ ಲೀಡ್ ಸಿಕ್ಕಿತ್ತು. ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಾರಂಪರಿಕ ಮತಗಳು ಇರುತ್ತವೆ. ಕೆಲವು ಸಲ ಅಭ್ಯರ್ಥಿ ಮತ್ತು ಪಕ್ಷ ನೋಡಿ ಮತದಾನ ಆಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಹೆಚ್ಚಾಯ್ತು ಸವದಿ – ಸತೀಶ್ ಜಾರಕಿಹೊಳಿ ಫೈಟ್: ಸಚಿವರ ವಿರುದ್ಧ ಸವದಿ ಬೆಂಬಲಿಗರಿಂದ ಆಕ್ರೋಶ

ವಿಧಾನಸಭೆ ಚುನಾವಣೆಯಲ್ಲಿ ನನಗೆ 76,000 ವೋಟ್ ಲೀಡ್​ ಬಂದಿತ್ತು. ಆದರೆ ಲೋಕಸಭಾ ಚುನಾವಣೆಯಲ್ಲಿ 7000 ವೋಟ್ ಮೈನಸ್​ ಆಗಿದೆ. ಇದಕ್ಕೆ ಕೆಲವು ಕಾರಣಗಳು, ದೋಷಗಳಿವೆ. ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇನೆ, ಬಹಿರಂಗವಾಗಿ ಹೇಳಲು ಆಗಲ್ಲ. ಚುನಾವಣೆ ನಿರ್ವಹಣೆಯಲ್ಲಿ ಅವರು ಎಡವಿದ ಕಾರಣಕ್ಕೆ ಹೀಗಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ ಪಕ್ಷಕ್ಕೆ ಬಂದವರಿಂದ ಕೊನೆಯ ವರೆಗೂ ಸಮಸ್ಯೆ: ಸವದಿ ವಿರುದ್ಧ ಸತೀಶ್ ಜಾರಕಿಹೊಳಿ‌ ಬಹಿರಂಗ ಅಸಮಾಧಾನ

ಬಿಜೆಪಿಯಿಂದ ಪಕ್ಷಕ್ಕೆ ಬಂದವರಿಂದ ಲೋಕಸಭೆ ಚುನಾವಣೆಯಲ್ಲಿ ಕೊನೆಯ ವರೆಗೂ ಸಮಸ್ಯೆಯಾಯಿತು ಎಂದು ಸವದಿ ವಿರುದ್ಧ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅಥಣಿಯಲ್ಲಿ ಮಾತನಾಡಿದ್ದ ಅವರು, ಈಗ ಕಾಂಗ್ರೆಸ್​ಗೆ ಜಯ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಮುಖಂಡರು ಬದಲಾದರೂ ಕಾರ್ಯಕರ್ತರು ಬದಲಾಗಲಿಲ್ಲ. ಅಥಣಿಯಲ್ಲಿ 20-30 ಸಾವಿರ ಲೀಡ್ ಸಿಗುತ್ತೆ ಅಂದುಕೊಂಡಿದ್ದೆವು. ಆದರೆ ಏನೋ ಮಾಡಲು ಹೋಗಿ ಇನ್ನೇನೋ ಆಯಿತು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.