‘ರಾಜ್ಯದ ಜನತೆಗೆ ಲೆಕ್ಕ ಕೊಡಿ’ ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಕೇಳಿರುವ 6 ಪ್ರಶ್ನೆ ಇಲ್ಲಿದೆ

ಬೆಂಗಳೂರು: ಕೊರೊನಾ ಚಿಕಿತ್ಸೆ ಉಪಕರಣಗಳ ಖರೀದಿ ಕುರಿತ ಲೆಕ್ಕವನ್ನು ರಾಜ್ಯದ ಜನತೆಗೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ‘ರಾಜ್ಯದ ಜನತೆಗೆ ಲೆಕ್ಕ ಕೊಡಿ’ ಅಭಿಯಾನವನ್ನ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಆರಂಭಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಆರು ಪ್ರಶ್ನೆಗಳನ್ನ ಕೇಳಿದ್ದಾರೆ. ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು, ಉತ್ತರ ಕೊಡುವುದು ಸರ್ಕಾರದ ಕರ್ತವ್ಯ ಎಂದು ಸಿದ್ದರಾಮಯ್ಯ ಅವರು ಕೇಳಿರುವ ಆರು ಪ್ರಶ್ನೆಗಳ ವಿಡಿಯೋವನ್ನು ಯೂಟ್ಯೂಬ್, ಫೇಸ್‌ಬುಕ್‌, ಟ್ವೀಟರ್‌ನಲ್ಲಿ ಅಪಲೋಡ್ ಮಾಡಲಾಗಿದೆ. # ರಾಜ್ಯದ ಜನ ಕೇಳುತ್ತಿದ್ದಾರೆ […]

'ರಾಜ್ಯದ ಜನತೆಗೆ ಲೆಕ್ಕ ಕೊಡಿ' ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಕೇಳಿರುವ 6 ಪ್ರಶ್ನೆ ಇಲ್ಲಿದೆ
Guru

| Edited By:

Jul 11, 2020 | 8:00 PM

ಬೆಂಗಳೂರು: ಕೊರೊನಾ ಚಿಕಿತ್ಸೆ ಉಪಕರಣಗಳ ಖರೀದಿ ಕುರಿತ ಲೆಕ್ಕವನ್ನು ರಾಜ್ಯದ ಜನತೆಗೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ‘ರಾಜ್ಯದ ಜನತೆಗೆ ಲೆಕ್ಕ ಕೊಡಿ’ ಅಭಿಯಾನವನ್ನ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಆರಂಭಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಆರು ಪ್ರಶ್ನೆಗಳನ್ನ ಕೇಳಿದ್ದಾರೆ.

ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು, ಉತ್ತರ ಕೊಡುವುದು ಸರ್ಕಾರದ ಕರ್ತವ್ಯ ಎಂದು ಸಿದ್ದರಾಮಯ್ಯ ಅವರು ಕೇಳಿರುವ ಆರು ಪ್ರಶ್ನೆಗಳ ವಿಡಿಯೋವನ್ನು ಯೂಟ್ಯೂಬ್, ಫೇಸ್‌ಬುಕ್‌, ಟ್ವೀಟರ್‌ನಲ್ಲಿ ಅಪಲೋಡ್ ಮಾಡಲಾಗಿದೆ.

# ರಾಜ್ಯದ ಜನ ಕೇಳುತ್ತಿದ್ದಾರೆ ಲೆಕ್ಕ ಕೊಡಿ. ಲೆಕ್ಕ‌ ಕೊಡಿ ಅಭಿಯಾನದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಕೇಳಿರುವ ಪ್ರಶ್ನೆಗಳು ಹೀಗಿವೆ. 1. ಕೊರೋನ ಸೋಂಕು ಬಂದಾಗಿನಿಂದ ಇದುವರೆಗೆ ರಾಜ್ಯ ಸರ್ಕಾರ ಖರ್ಚು ಮಾಡಿದ ಹಣ ಎಷ್ಟು? ಕೇಂದ್ರ ಸರ್ಕಾರ ಎಷ್ಟು ನೀಡಿದೆ? 2. ಯಾವ ಯಾವ ಇಲಾಖೆ ಯಾವ ಬಾಬತ್ತಿಗೆ ಎಷ್ಟು ಹಣ ಖರ್ಚು ಮಾಡಿವೆ? 3. ಪಿಪಿಇ ಕಿಟ್, ಟೆಸ್ಟ್ ಕಿಟ್,ಗ್ಲೌಸ್,ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್, ಕಿಯೋಸ್ಕ್ ಮುಂತಾದವುಗಳಿಗೆ ಮಾರುಕಟ್ಟೆ ದರ ಎಷ್ಟು? ನೀವು ಪ್ರತಿಯೊಂದನ್ನು ಯಾವ ದರಕ್ಕೆ ಖರೀದಿಸಿದ್ದೀರಿ? 4. ಈವರೆಗೆ ಎಷ್ಟು ಫುಡ್ ಕಿಟ್ ಎಷ್ಟು ಫುಡ್ ಪ್ಯಾಕೆಟ್ ಕೊಟ್ಟಿದ್ದೀರಿ? ಯಾರಿಗೆ ಕೊಟ್ಟಿದ್ದೀರಿ? ಪ್ರತಿಯೊಂದಕ್ಕೆ ಎಷ್ಟು ಹಣ ಖರ್ಚು ಮಾಡಿದ್ದೀರಿ? ತಾಲೂಕುವಾರು, ವಾರ್ಡ್ ವಾರು ಲೆಕ್ಕ ಕೊಡಿ. 5. ವಲಸೆ ಕಾರ್ಮಿಕರಿಗೆ ಪ್ರಯಾಣದ ಸಂದರ್ಭದಲ್ಲಿ ಎಷ್ಟು ಫುಡ್ ಕಿಟ್ ಕೊಟ್ಟಿದ್ದೀರಿ? ಏನೇನು ಕೊಟ್ಟಿದ್ದೀರಿ? ಪ್ರತಿ ಕಿಟ್ ಗೆ ಖರ್ಚು ಮಾಡಿದ ಹಣ ಎಷ್ಟು? ಸಂಕಷ್ಟದಲ್ಲಿರುವ ಜನರಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಘೋಷಿಸಿದ ಪ್ಯಾಕೇಜುಗಳು ಯಾವುವು? ಇದುವರೆಗೆ ಯಾವ ಯಾವ ವೃತ್ತಿಯವರಿಗೆ, ಯಾವ ಯಾವ ಸಮುದಾಯಕ್ಕೆ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ? 6. ಕೊರೋನ‌ ಸಂತ್ರಸ್ತರ ಆರೈಕೆಗೆ ಎಷ್ಟು ಹಣ ಖರ್ಚು ಮಾಡಿದ್ದೀರಿ? ಎಲ್ಲದರ ಸಂಪೂರ್ಣ ಲೆಕ್ಕ ಕೊಡಿ.. ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada