AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರು-ಸಚಿವರ ವಿಶ್ವಾಸ ಕಳೆದುಕೊಂಡ ಸರ್ಕಾರ ಏಕಿರಬೇಕು: ರಾಷ್ಟ್ರಪತಿ ಆಳ್ವಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ರಾಜ್ಯದಲ್ಲಿ ಸರ್ಕಾರವೇ ಇಲ್ಲ. ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಮಾತನಾಡಿದ್ದಾರೆ.

ಶಾಸಕರು-ಸಚಿವರ ವಿಶ್ವಾಸ ಕಳೆದುಕೊಂಡ ಸರ್ಕಾರ ಏಕಿರಬೇಕು: ರಾಷ್ಟ್ರಪತಿ ಆಳ್ವಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
shruti hegde
|

Updated on: Apr 02, 2021 | 5:09 PM

Share

ದಾವಣಗೆರೆ: ರಾಜ್ಯದಲ್ಲಿ ಸರ್ಕಾರವೇ ಅಸ್ತಿತ್ವದಲ್ಲಿಲ್ಲ. ಈ ಕೂಡಲೇ ರಾಷ್ಟ್ರಪತಿ ಆಳ್ವಿಕೆಗೆ ರಾಜ್ಯಪಾಲರು ಶಿಫಾರಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ಸಂಗೊಳ್ಳಿರಾಯಣ್ಣ ಕಂಚಿನ ಪ್ರತಿಮೆಯನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ರಾಜಕಾರಣ ಮತ್ತು ಆಡಳಿತ ವ್ಯವಸ್ಥೆ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಭ್ರಷ್ಟಾಚಾರ ವ್ಯಾಪಕವಾಗಿದೆ. ಸಚಿವ ಸಂಪುಟದಲ್ಲಿರುವವರಿಗೂ ಒಬ್ಬರ ಮೇಲೆ  ಮತ್ತೊಬ್ಬರಿಗೆ ನಂಬಿಕೆಯೇ ಇಲ್ಲ. ಇದೇ ಕಾರಣಕ್ಕೆ ರಾಷ್ಟ್ರಪತಿ ಆಳ್ವಿಕೆ ಬರಬೇಕು. ಬಿ.ಎಸ್​ ಯಡಿಯೂರಪ್ಪ ಅವರ ಸರ್ಕಾರ ರಾಜೀನಾಮೆ ಕೊಡಬೇಕು. ಆಡಳಿತ ಪಕ್ಷದ ಶಾಸಕರು, ಸಚಿವರೇ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ಸರ್ಕಾರ ಪತನವಾಗಬೇಕು ಎಂದರು. ಸಿಡಿ ಪ್ರಕರಣದ ಬಗ್ಗೆ ಎಸ್​ಐಟಿ ತನಿಖೆ ಆಗುತ್ತಿದೆ, ತನಿಖೆ ನಡೆಯಲಿ ಎಂದು ಸಿದ್ದರಾಮಯ್ಯ ಮಾತನಾಡಿದರು.

ಮುಖ್ಯಮಂತ್ರಿ ಕಾರ್ಯವೈಖರಿ ಖಂಡಿಸಿ ಹೈಕಮಾಂಡ್​ಗೆ ಪತ್ರ ಬರೆದ ಕೆ.ಎಸ್​ ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆಗೆದುಕೊಂಡ ಕೆಲ ಕ್ರಮಗಳನ್ನು ಖಂಡಿಸಿದ್ದರು. ಈ ಬೆಳವಣಿಗೆಯೊಂದಿಗೆ ಬಿಜೆಪಿ ರಾಜ್ಯ ಘಟಕದಲ್ಲಿ ಮತ್ತು ಸರ್ಕಾರದ ಮುಂಚೂಣಿ ನಾಯಕರಲ್ಲಿ ಮತ್ತೆ ಕೋಲ್ಡ್ ವಾರ್ ಭುಗಿಲೆದ್ದಿದೆ. ಮುಖ್ಯಮಂತ್ರಿ ಕಾರ್ಯವೈಖರಿ ಖಂಡಿಸಿ ಸಚಿವ ಸಂಪುಟದ ಹಿರಿಯ ಸದಸ್ಯರು ಮತ್ತು ಮುಖ್ಯಮಂತ್ರಿಯ ತವರೂ ಜಿಲ್ಲೆಯೂ ಆಗಿರುವ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಪತ್ರದ ಮೂಲಕ ದೂರು ಸಲ್ಲಿಸಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ಸಲ್ಲಿಸಿರುವ ಲಿಖಿತ ದೂರಿನ ಪ್ರತಿ ‘ಟಿವಿ9 ಕನ್ನಡ ಡಿಜಿಟಲ್’ಗೆ ಲಭ್ಯವಾಗಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನನ್ನ ಗಮನಕ್ಕೆ ಬಾರದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಿಡುಗಡೆಯಾಗಬೇಕಾಗಿದ್ದ ಹಣವನ್ನು ಶಾಸಕರಿಗೆ ಬಿಡುಗಡೆ ಮಾಡಿದ್ದಾರೆ. ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡಿದ್ದಾರೆ ಎಂದು ಈಶ್ವರಪ್ಪ ತಮ್ಮ ಎರಡು ಪುಟಗಳ ದೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರು ಮಧ್ಯಪ್ರವೇಶಿಸಿ ಮುಖ್ಯಮಂತ್ರಿಗಳನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು: ಸಿದ್ದರಾಮಯ್ಯ​

ಸಿದ್ದರಾಮಯ್ಯ ತಮ್ಮ 5 ವರ್ಷ ಕಾಲ ಆಡಳಿತದಲ್ಲಿ ಏನೂ ಮಾಡದಿದ್ದಕ್ಕೆ ಹೀಗೆ ಮಾತಾಡ್ತಿದ್ದಾರೆ ಎಂದ ಡಿಸಿಎಂ ಕಾರಜೋಳ

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ