ದಾವಣಗೆರೆ: ರಾಜ್ಯದಲ್ಲಿ ಸರ್ಕಾರವೇ ಅಸ್ತಿತ್ವದಲ್ಲಿಲ್ಲ. ಈ ಕೂಡಲೇ ರಾಷ್ಟ್ರಪತಿ ಆಳ್ವಿಕೆಗೆ ರಾಜ್ಯಪಾಲರು ಶಿಫಾರಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ಸಂಗೊಳ್ಳಿರಾಯಣ್ಣ ಕಂಚಿನ ಪ್ರತಿಮೆಯನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ರಾಜಕಾರಣ ಮತ್ತು ಆಡಳಿತ ವ್ಯವಸ್ಥೆ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಭ್ರಷ್ಟಾಚಾರ ವ್ಯಾಪಕವಾಗಿದೆ. ಸಚಿವ ಸಂಪುಟದಲ್ಲಿರುವವರಿಗೂ ಒಬ್ಬರ ಮೇಲೆ ಮತ್ತೊಬ್ಬರಿಗೆ ನಂಬಿಕೆಯೇ ಇಲ್ಲ. ಇದೇ ಕಾರಣಕ್ಕೆ ರಾಷ್ಟ್ರಪತಿ ಆಳ್ವಿಕೆ ಬರಬೇಕು. ಬಿ.ಎಸ್ ಯಡಿಯೂರಪ್ಪ ಅವರ ಸರ್ಕಾರ ರಾಜೀನಾಮೆ ಕೊಡಬೇಕು. ಆಡಳಿತ ಪಕ್ಷದ ಶಾಸಕರು, ಸಚಿವರೇ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ಸರ್ಕಾರ ಪತನವಾಗಬೇಕು ಎಂದರು. ಸಿಡಿ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ಆಗುತ್ತಿದೆ, ತನಿಖೆ ನಡೆಯಲಿ ಎಂದು ಸಿದ್ದರಾಮಯ್ಯ ಮಾತನಾಡಿದರು.
ಮುಖ್ಯಮಂತ್ರಿ ಕಾರ್ಯವೈಖರಿ ಖಂಡಿಸಿ ಹೈಕಮಾಂಡ್ಗೆ ಪತ್ರ ಬರೆದ ಕೆ.ಎಸ್ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆಗೆದುಕೊಂಡ ಕೆಲ ಕ್ರಮಗಳನ್ನು ಖಂಡಿಸಿದ್ದರು. ಈ ಬೆಳವಣಿಗೆಯೊಂದಿಗೆ ಬಿಜೆಪಿ ರಾಜ್ಯ ಘಟಕದಲ್ಲಿ ಮತ್ತು ಸರ್ಕಾರದ ಮುಂಚೂಣಿ ನಾಯಕರಲ್ಲಿ ಮತ್ತೆ ಕೋಲ್ಡ್ ವಾರ್ ಭುಗಿಲೆದ್ದಿದೆ. ಮುಖ್ಯಮಂತ್ರಿ ಕಾರ್ಯವೈಖರಿ ಖಂಡಿಸಿ ಸಚಿವ ಸಂಪುಟದ ಹಿರಿಯ ಸದಸ್ಯರು ಮತ್ತು ಮುಖ್ಯಮಂತ್ರಿಯ ತವರೂ ಜಿಲ್ಲೆಯೂ ಆಗಿರುವ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಪತ್ರದ ಮೂಲಕ ದೂರು ಸಲ್ಲಿಸಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ಸಲ್ಲಿಸಿರುವ ಲಿಖಿತ ದೂರಿನ ಪ್ರತಿ ‘ಟಿವಿ9 ಕನ್ನಡ ಡಿಜಿಟಲ್’ಗೆ ಲಭ್ಯವಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನನ್ನ ಗಮನಕ್ಕೆ ಬಾರದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಿಡುಗಡೆಯಾಗಬೇಕಾಗಿದ್ದ ಹಣವನ್ನು ಶಾಸಕರಿಗೆ ಬಿಡುಗಡೆ ಮಾಡಿದ್ದಾರೆ. ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡಿದ್ದಾರೆ ಎಂದು ಈಶ್ವರಪ್ಪ ತಮ್ಮ ಎರಡು ಪುಟಗಳ ದೂರಿನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯಪಾಲರು ಮಧ್ಯಪ್ರವೇಶಿಸಿ ಮುಖ್ಯಮಂತ್ರಿಗಳನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು: ಸಿದ್ದರಾಮಯ್ಯ
ಸಿದ್ದರಾಮಯ್ಯ ತಮ್ಮ 5 ವರ್ಷ ಕಾಲ ಆಡಳಿತದಲ್ಲಿ ಏನೂ ಮಾಡದಿದ್ದಕ್ಕೆ ಹೀಗೆ ಮಾತಾಡ್ತಿದ್ದಾರೆ ಎಂದ ಡಿಸಿಎಂ ಕಾರಜೋಳ