ಯಾರೇನೇ ಹೇಳಲಿ ನಾವು ಜನರೊಂದಿಗಿದ್ದೇವೆ, ಅವರು ನಮ್ಮೊಂದಿಗಿದ್ದಾರೆ: ಡಿಕೆ ಶಿವಕುಮಾರ್

|

Updated on: May 24, 2024 | 12:34 PM

ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣಗೆ ಪತ್ರ ಬರೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಶಿವಕುಮಾರ್ ಅದು ಅವರ ಕುಟುಂಬಕ್ಕೆ ಸಂಬಂಧಿಸಿದ ವಿಷಯ, ಕಾಮೆಂಟ್ ಮಾಡಲ್ಲ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿರುವ ಕಾಮೆಂಟ್ ಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ, ಯಾರು ಏನು ಬೇಕಾದರೂ ಹೇಳಿಕೊಳ್ಳಲಿ, ನಾವು ಜನರರೊಂದಿಗಿದ್ದೇವೆ ಮತ್ತು ಜನ ನಮ್ಮೊಂದಿಗಿದ್ದಾರೆ ಎಂದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಿಂದ ಹೂಡಿಕೆದಾರರು ವಾಪಸ್ಸು ಹೋಗುತ್ತಿದ್ದಾರೆ ಎಂದು ಹೇಳಿರುವ ಬಿಜೆಪಿ ನಾಯಕರನ್ನು (BJP leaders) ತರಾಟೆಗೆ ತೆಗೆದುಕೊಂಡರು. ಈ ಮಾತನ್ನು ಹೇಳಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು, ತಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ, ಉದ್ಯಮಿ ಮತ್ತು ಹೂಡಿಕೆದಾರರಿಗೆ (industrialists and investors) ನೀಡಿದ ಕಿರುಕುಳದಿಂದ ಲಕ್ಷಾಂತರ ಜನ ಬೇರೆ ರಾಜ್ಯಗಳಿಗೆ ಹೋದರು. ದಾಖಲೆಗಳನ್ನು ನೋಡಿಕೊಂಡು ಅವರು ಮಾತಾಡಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಉದ್ಯಮಿಗಳು ವಾಪಸ್ಸು ಬರುತ್ತಿದ್ದಾರೆ, ತಮ್ಮ ಸರ್ಕಾರದ ಕೈಗಾರಿಕೆಗಳ ಸಚಿವ ಮತ್ತು ಮಾಹಿತಿ ತಂತ್ರಜ್ಞಾನದ ಸಚಿವರು ಅದ್ಭುತವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣಗೆ ಪತ್ರ ಬರೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಶಿವಕುಮಾರ್ ಅದು ಅವರ ಕುಟುಂಬಕ್ಕೆ ಸಂಬಂಧಿಸಿದ ವಿಷಯ, ಕಾಮೆಂಟ್ ಮಾಡಲ್ಲ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿರುವ ಕಾಮೆಂಟ್ ಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ, ಯಾರು ಏನು ಬೇಕಾದರೂ ಹೇಳಿಕೊಳ್ಳಲಿ, ನಾವು ಜನರರೊಂದಿಗಿದ್ದೇವೆ ಮತ್ತು ಜನ ನಮ್ಮೊಂದಿಗಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ರನ್ನು ಅವರ ನಿವಾಸದಲ್ಲಿ ಭೇಟಿಯಾದ ಕೆಎಲ್​ಇ ಸೊಸೈಟಿ ಅಧ್ಯಕ್ಷ ಪ್ರಭಾಕರ್ ಕೋರೆ

Follow us on