ವಿಧಾನ ಪರಿಷತ್​​ ಚುನಾವಣೆ: ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ವಾಟಾಳ್ ನಾಗರಾಜ್ ಗೆ ಮುಖಭಂಗ, ಠೇವಣಿ ನಷ್ಟ

Legislative Council polls -South graduates constituency: ದಕ್ಷಿಣ ಪದವೀಧರರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವಾಟಾಳ್ ನಾಗರಾಜ್ ತೀವ್ರ ಮುಖಭಂಗ ಅನುಭವಿಸಿದ್ದು ಠೇವಣಿ ಕಳೆದುಕೊಂಡಿದ್ದಾರೆ.

ವಿಧಾನ ಪರಿಷತ್​​ ಚುನಾವಣೆ: ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ವಾಟಾಳ್ ನಾಗರಾಜ್ ಗೆ ಮುಖಭಂಗ, ಠೇವಣಿ ನಷ್ಟ
ದಕ್ಷಿಣ ಪದವೀಧರ ಚುನಾವಣೆ: ವಾಟಾಳ್ ನಾಗರಾಜ್ ಗೆ ಮುಖಭಂಗ, ಠೇವಣಿ ನಷ್ಟ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 16, 2022 | 5:52 PM

ಮೈಸೂರು: ವಿಧಾನ ಪರಿಷತ್​​ ಚುನಾವಣೆಯಲ್ಲಿ ದಕ್ಷಿಣ ಪದವೀಧರರ ಕ್ಷೇತ್ರದಿಂದ (Legislative Council polls -South graduates constituency) ಸ್ಪರ್ಧಿಸಿದ್ದ ವಾಟಾಳ್ ನಾಗರಾಜ್ (vatal nagaraj) ತೀವ್ರ ಮುಖಭಂಗ ಅನುಭವಿಸಿದ್ದು ಠೇವಣಿ ಕಳೆದುಕೊಂಡಿದ್ದಾರೆ (deposit). ಕನ್ನಡ ವಾಟಾಳು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ವಾಟಾಳ್ ನಾಗರಾಜ್ ಕೇವಲ 516 ಮತಗಳನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ. ಚುನಾವಣೆ ವೇಳೆ ಬಿರುಸಿನ ಪ್ರಚಾರ ನಡೆಸಿದ್ದ ವಾಟಾಳ್ ನಾಗರಾಜ್ ಅವರನ್ನು ಪದವೀಧರ ಕ್ಷೇತ್ರದ ಮತದಾರರು ಈ ಬಾರಿಯೂ ಕೈ ಹಿಡಿದಿಲ್ಲ. ಈ ಹಿಂದೆ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದ ವಾಟಾಳ್ ನಾಗರಾಜ್ ಅಲ್ಲೂ ಠೇವಣಿ ಕಳೆದುಕೊಂಡಿದ್ದರು ಎಂಬುದು ಗಮನಾರ್ಹ.

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮಧು ಜಿ.ಮಾದೇಗೌಡಗೆ 12,205 ಮತಗಳ ಅಂತರದಿಂದ ಜಯ

ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಮಧು ಜಿ.ಮಾದೇಗೌಡಗೆ ಒಟ್ಟು 45,275 ಮತಗಳು ಪಡೆದುಕೊಂಡಿದ್ದು, 12,205 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಗೆಲುವಿಗೆ ನಿಗದಿತ 46,083 ಮತಗಳ ನಿಗದಿತ ಕೋಟ ತಲುಪಲು 808 ಮತಗಳ ಕೊರತೆ ಎದುರಾಗಿತ್ತು. ಪ್ರತಿಸ್ಪರ್ಧಿ ಬಿಜೆಪಿಯ ರವಿಶಂಕರ್​ ಎಲಿಮಿನೇಟ್​ ಮಾಡಿ ಅಲ್ಲಿಂದ 808 ಮತ ಪಡೆದಿದ್ದು, ಆ ಮೂಲಕ ನಿಗದಿತ ಕೋಟ ತಲುಪಿದ ಮಧು ಜಿ.ಮಾದೇಗೌಡ, ಪರಾಜಿತ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್​ಗೆ 33,878 ಮತಗಳು ಮತ್ತು ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಾಮುಗೆ ಕೇವಲ 19,630 ಮತಗಳನ್ನು ಪಡೆದುಕೊಂಡಿದ್ದಾರೆ. ಪರಿಷತ್​ನ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಮತ ಎಣಿಕೆ ಇಂದು ಬೆಳಿಗ್ಗೆ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡ ಗೆಲುವು ಬಹುತೇಕ ಪಕ್ಕಾ ಆಗಿತ್ತು. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿತ್ತು. ಎಲ್ಲ ಹಂತದಲ್ಲೂ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್ (Congress) ಅಭ್ಯರ್ಥಿ, ಇದೇ ಮೊದಲ ಬಾರಿಗೆ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ದಕ್ಷಿಣ ಪದವೀಧರ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಗೆಲುವು ಇದಾಗಿದೆ.

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Thu, 16 June 22