AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3000 ಮತ ಖರೀದಿ: ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗಕ್ಕೆ ಲೇಹರ್ ಸಿಂಗ್ ಪತ್ರ

ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ಆರೋಪ ಮಾಡಿದ ಬೆನ್ನಲ್ಲೇ, ಮಾಜಿ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಮತ ಖರೀದಿ ಆರೋಪವನ್ನು ಮಾಡಿದ್ದಾರೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡ ಬಿಜೆಪಿ, ಸಿಎಂ ಸಿದ್ದರಾಮಯ್ಯ ಹಾಗೂ ಮತಗಳ್ಳತನ ಆರೋಪ ಮಾಡಿರುವ ರಾಹುಲ್ ಗಾಂಧಿ ವಿರುದ್ಧ ಮುಗಿಬಿದ್ದಿದೆ.

3000 ಮತ ಖರೀದಿ: ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗಕ್ಕೆ ಲೇಹರ್ ಸಿಂಗ್ ಪತ್ರ
ಇಬ್ರಾಹಿಂ, ಸಿದ್ದರಾಮಯ್ಯ, ಲೇಹರ್ ಸಿಂಗ್
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ|

Updated on: Aug 12, 2025 | 3:40 PM

Share

ಬೆಂಗಳೂರು, (ಆಗಸ್ಟ್ 12) : ವಿಪಕ್ಷದ ನಾಯಕ ರಾಹುಲ್ ಗಾಂಧಿ  (Rahul Gandhi) ಮತಗಳ್ಳತನದ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬೆಂಗಳೂರಿನಲ್ಲಿ ಪ್ರತಿಭಟನಾ ಸಮಾವೇಶ ನಡೆಸಿ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಕೆಲ ಅಂಕಿ-ಸಂಖ್ಯೆ ಬಿಡುಗಡೆಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯನವರ (Siddaramaiah) ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಸಿ.ಎಂ. ಇಬ್ರಾಹಿಂ, ಸಿದ್ದರಾಮಯ್ಯ ವಿರುದ್ಧ ಮತ ಖರೀದಿ ಆರೋಪ ಮಾಡಿದ್ದಾರೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡ ಬಿಜೆಪಿ, ಇದೀಗ ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಈ ಸಂಬಂಧ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್() ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಸಿ.ಎಂ.ಇಬ್ರಾಹಿಂ (CM Ibrahim) ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಈ ಮತಗಳ್ಳತನ ಬಗ್ಗೆ ಗಂಭೀರ ಆರೋಪ ಮಾಡಿರುವ ರಾಹುಲ್ ಗಾಂಧಿ ದೆಹಲಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಸಾಲದಕ್ಕೆ ಮೊನ್ನೆ ಅಷ್ಟೇ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿ ಮತಗಳ್ಳನ ವಿರುದ್ಧದ ಪ್ರತಿಭಟನಾ ಸಮಾವೇಶ ಮಾಡಿದ್ದರು. ಇದರ ಬೆನ್ನಲ್ಲೇ ಸಿ.ಎಂ . ಇಬ್ರಾಹಿಂ, ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು, ಆರು ತಿಂಗಳ ನಂತರ ಸಿದ್ದರಾಮಯ್ಯ ಆ ಸಾಲವನ್ನು ವಾಪಸ್ ಕೊಟ್ಟರು ಎಂದು ಬಹಿರಂಗ ಹೇಳಿಕೆ ನೀಡಿದ್ದರು. ಇದನ್ನು ಇದೀಗ ಬಿಜೆಪಿ ಅಸ್ತ್ರವನ್ನಾಗಿಸಿಕೊಂಡಿದ್ದು, ಈ ಸಂಬಂಧ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್, ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಮತಗಳ್ಳತನ ಆರೋಪ: ಸಂಸದ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

ಇಬ್ರಾಹಿಂ ಹೇಳಿದ್ದೇನು?

“2018ರ ಅಸೆಂಬ್ಲಿ ಚುನಾವಣೆಯಲ್ಲಿ ಏನಾಗಿತ್ತು ಗೊತ್ತಾ? ಚಾಮುಂಡೇಶ್ವರಿಯಲ್ಲಿನ ಗ್ರೌಂಡ್ ರಿಪೋರ್ಟ್ ಸರಿಯಿರಲಿಲ್ಲ, ಅದಕ್ಕಾಗಿ ಬಾದಾಮಿಯಲ್ಲೂ ಸಿದ್ದರಾಮಯ್ಯ ಕಣಕ್ಕಿಳಿದಿದ್ದರು. ಎರಡು ಕಡೆ ಸ್ಪರ್ಧಿಸಿದ್ದರು. ಬಾದಾಮಿಯಲ್ಲಿ, ಮೂರು ಸಾವಿರ ಮತವನ್ನು ಖರೀದಿಸದಿದ್ದರೆ ಅಲ್ಲೂ ಸೋಲುತ್ತಿದ್ದರು” ಎಂದು ಸಿಎಂ ಇಬ್ರಾಹಿಂ ಹೇಳಿದ್ದರು.

ಬಾದಾಮಿಯಲ್ಲಿ ನಾನು ಬುದ್ದಿವಂತಿಕೆಯಿಂದ ಕೆಲಸ ಮಾಡಿದೆ. ಅಲ್ಲಿನ ಪರಿಸ್ಥಿತಿಯೂ ಸಿದ್ದರಾಮಯ್ಯನವರಿಗೆ ಪೂರಕವಾಗಿರಲಿಲ್ಲ. ನಾನು ಬೇರೆ ಕಡೆ ಸಾಲ ಮಾಡಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿದ್ದೆ. ಆ ಕಾರಣಕ್ಕಾಗಿ, ಅವರು ಅಲ್ಪಮತದಲ್ಲಿ ಗೆಲುವು ಸಾಧಿಸಿದರು. ಆರು ತಿಂಗಳ ನಂತರ, ಸಿದ್ದರಾಮಯ್ಯ ನಾನು ಖರ್ಚು ಮಾಡಿದ್ದ ದುಡ್ಡನ್ನು ವಾಪಸ್ ಕೊಟ್ಟರು ಎಂದು ಎಂದಿದ್ದಾರೆ.

ನಾನು ಹೇಳುತ್ತಿರುವುದು ನಿಜ, ನಾನು ಎಲ್ಲಿ ಬೇಕಾದರೂ ಪ್ರಮಾಣ ಮಾಡುತ್ತೇನೆ. ಆದರೆ, ಮೇಲ್ಮನೆಯಲ್ಲಿ ನನ್ನನ್ನು ಗೌರವದಿಂದ ಕಾಣಲಿಲ್ಲ, ಆ ಕಾರಣಕ್ಕಾಗಿ ರಾಜೀನಾಮೆ ನೀಡಿದೆ ಎಂದು ಇಬ್ರಾಹಿಂ ಹೇಳಿದ್ದಾರೆ. ಆ ಮೂಲಕ, ಮತದಾರರಿಗೆ ದುಡ್ಡು ಕೊಟ್ಟು ಮತ ಚಲಾಯಿಸಿಕೊಂಡಿದ್ದನ್ನು ಪರೋಕ್ಷವಾಗಿ ಹೇಳಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ