ಪ್ರತ್ಯೇಕ ಪ್ರಕರಣ: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು, ಮೈಸೂರಿನಲ್ಲಿ ಮತ್ತೆ ಹುಲಿ ಆತಂಕ, ಸಿಸಿ ಕ್ಯಾಮರಾದಲ್ಲಿ ಚಲನವಲನ ಸೆರೆ

| Updated By: ವಿವೇಕ ಬಿರಾದಾರ

Updated on: Dec 01, 2023 | 12:57 PM

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿದೆ. ಇನ್ನು ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಸಿಂಧುವಳ್ಳಿ, ಬ್ಯಾತಹಳ್ಳಿ, ಚಿಕ್ಕಕಾನ್ಯ, ದೊಡ್ಡಕಾನ್ಯ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿದೆ. ಹುಲಿ ಚಲನವಲನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಪ್ರತ್ಯೇಕ ಪ್ರಕರಣ: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು, ಮೈಸೂರಿನಲ್ಲಿ ಮತ್ತೆ ಹುಲಿ ಆತಂಕ, ಸಿಸಿ ಕ್ಯಾಮರಾದಲ್ಲಿ ಚಲನವಲನ ಸೆರೆ
ಮೃತ ಚಿರತೆ
Follow us on

ಮಂಡ್ಯ ಡಿ. 01: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ (Leopard) ಮೃತಪಟ್ಟಿರುವ ಘಟನೆ ಮಳವಳ್ಳಿ (Malavalli) ತಾಲೂಕಿನ ಬಾಚನಹಳ್ಳಿ ಗ್ರಾಮದ ಬಳಿಯ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಚಿರತೆ ರಸ್ತೆ ಬದಿ ಹಾರಿ ಬಿದ್ದಿದೆ. ಸುಮಾರು ಮೂರು ವರ್ಷದ ಗಂಡು ಚಿರತೆ ಸಾವಿಗೀಡಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಸಳೆಯ ಅಂತ್ಯಸಂಸ್ಕಾರ ನೆರವೇರಿಸಿದ ಜನ

ಕಲಬುರಗಿ: ಶಹಬಾದ್ ತಾಲೂಕಿನ ಗೋಳಾ (ಕೆ) ಗ್ರಾಮದ ಬಳಿ ಇರುವ ಕಾಗಿಣಾ ನದಿಯ ಬ್ರೀಡ್ಜ್ ಕಮ್ ಬ್ಯಾರೇಜ್‌ನಲ್ಲಿ ಮೊಸಳೆ ಮೃತದೇಹ ಪತ್ತೆ‌ಯಾಗಿದೆ. ನದಿಯಲ್ಲಿ ಮೊಸಳೆ ಕಂಡ ಜನ‌ ಗಾಬರಿಗೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ‌ ಮೊಸಳೆ ಮೃತಪಟ್ಟಿರೋದಾಗಿ ಹೇಳಿದರು. ಪಶು ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ಮೃತ ಮೊಸಳೆ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಇದನ್ನೂ ಓದಿ: ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಹುಲಿ ದಾಳಿ

ಮೈಸೂರು ಮತ್ತೆ ಹುಲಿ ಆತಂಕ, ಸಿಸಿ ಕ್ಯಾಮರಾದಲ್ಲಿ ಚಲನವಲನ ಸೆರೆ

ಮೈಸೂರು: ಮೈಸೂರು ತಾಲೂಕಿನ ಜಯಪುರ ಹೋಬಳಿ ಸಿಂಧುವಳ್ಳಿ, ಬ್ಯಾತಹಳ್ಳಿ, ಚಿಕ್ಕಕಾನ್ಯ, ದೊಡ್ಡಕಾನ್ಯ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿದೆ. ಹುಲಿ ಚಲನವಲನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಲಿ ಸೆರೆಗಾಗಿ ಅರಣ್ಯ ಇಲಾಖೆಯಿಂದ ಬೋನ್ ಅಳವಡಿಸಿದೆ.

ಗುರುವಾರ ರಾತ್ರಿ ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ‌ ನೀಡಿ, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ಮಾಹಿತಿ ಪಡೆದುಕೊಂಡರು. ಸೂಕ್ತ ಕಾರ್ಯಚರಣೆ ಮೂಲಕ‌ ಹುಲಿ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಜಿ.ಟಿ ದೇವೇಗೌಡ ಸೂಚನೆ ನೀಡಿದರು. ಅಲ್ಲದೆ ಗ್ರಾಮಸ್ಥರು ರಾತ್ರಿ ವೇಳೆಯಲ್ಲಿ ಅನವಶ್ಯಕವಾಗಿ ಓಡಾಡದಂತೆ ಮನವಿ ಮಾಡಿದರು. ಹುಲಿ ಕಾರ್ಯಚರಣೆ ಮುಗಿಯುವವರೆಗೆ ಜನರು ಸಹಕರಿಸುವಂತೆ ವಿನಂತಿಸಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ