ಬೆಂಗಳೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ!

|

Updated on: Jan 23, 2021 | 11:18 PM

ನಗರದ ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ನಿನ್ನೆ ಕಾಣಿಸಿಕೊಂಡಿದ್ದ ಚಿರತೆಯೊಂದು ಇದೀಗ ಇಂದು ಸಂಜೆ ಮತ್ತೆ ಪ್ರತ್ಯಕ್ಷವಾಗಿದೆ. ಇದರಿಂದ ಅಪಾರ್ಟ್​ಮೆಂಟ್​ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಬೆಂಗಳೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ!
ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ
Follow us on

ಬೆಂಗಳೂರು: ನಗರದ ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ನಿನ್ನೆ ಕಾಣಿಸಿಕೊಂಡಿದ್ದ ಚಿರತೆಯೊಂದು ಇದೀಗ ಇಂದು ಸಂಜೆ ಮತ್ತೆ ಪ್ರತ್ಯಕ್ಷವಾಗಿದೆ. ಇದರಿಂದ ಅಪಾರ್ಟ್​ಮೆಂಟ್​ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಅಪಾರ್ಟ್​ಮೆಂಟ್​ನ ಪಾರ್ಕಿಂಗ್ ಏರಿಯಾದಲ್ಲಿ ಚಿರತೆ ಓಡಾಡಿರುವ ಮಾಹಿತಿ ಸಿಕ್ಕಿದೆ. ನಿನ್ನೆ ಕಾರಿನ ಬಳಿ ಚಿರತೆ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಇಂದು ಚಿರತೆ ಮತ್ತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿದ್ದು ಸ್ಥಳದಲ್ಲಿ ಅಲರ್ಟ್ ಘೋಷಣೆಯಾಗಿದೆ. ಜೊತೆಗೆ, ಅಪಾರ್ಟ್​ಮೆಂಟ್​ ನಿವಾಸಿಗಳಿಗೆ ಹೊರ ಬರದಂತೆ ಅರಣ್ಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಾಗಿಲು ಮತ್ತು ಕಿಟಕಿ ತೆರೆಯದಂತೆ ಸಹ ಸೂಚಿಸಲಾಗಿದೆ. ಇದಲ್ಲದೆ, ಅರಣ್ಯ ಅಧಿಕಾರಿಗಳು ಬೋನ್ ಇಟ್ಟು ಚಿರತೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ