ಜೀವ ಬೆದರಿಕೆ, ಜಾತಿ ನಿಂದನೆ ಕೇಸ್​: ಮುನಿರತ್ನ ಬಂಧನದ ನಂತರ ಮತ್ತೊಂದು ಆಡಿಯೋ ವೈರಲ್

ಗುತ್ತಿಗೆದಾರನ ಜೊತೆ ಮಾತನಾಡಿದ್ದಾರೆ ಎನ್ನಲಾದ ಶಾಸಕ ಮುನಿರತ್ನ ಆಡಿಯೋ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಗುತ್ತಿಗೆದಾರನ ದೂರು ಆಧರಿಸಿ, ನಿನ್ನೆ ಸಂಜೆಯೇ ಮುನಿರತ್ನರನ್ನ ಪೊಲೀಸರು ಬಂಧಿಸಿದ್ದರು. ಸದ್ಯ ಇದೆಲ್ಲದರ ಮಧ್ಯೆ ಮತ್ತೊಂದು ಆಡಿಯೋ ವೈರಲ್​ ಆಗಿದೆ. ವೈರಲ್ ಆಗಿರುವ ಆಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.

ಜೀವ ಬೆದರಿಕೆ, ಜಾತಿ ನಿಂದನೆ ಕೇಸ್​: ಮುನಿರತ್ನ ಬಂಧನದ ನಂತರ ಮತ್ತೊಂದು ಆಡಿಯೋ ವೈರಲ್
ಜೀವ ಬೆದರಿಕೆ, ಜಾತಿ ನಿಂದನೆ ಕೇಸ್​: ಮುನಿರತ್ನ ಬಂಧನದ ನಂತರ ಮತ್ತೊಂದು ಆಡಿಯೋ ವೈರಲ್
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on:Sep 15, 2024 | 9:37 PM

ಬೆಂಗಳೂರು, ಸೆಪ್ಟೆಂಬರ್​ 15: ಗುತ್ತಿಗೆದಾರನಿಗೆ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಕೇಸ್‌ನಲ್ಲಿ ಶಾಸಕ ಮುನಿರತ್ನ (munirathna) ಬಂಧನವಾಗಿದ್ದು, ನಿನ್ನೆ ತಡರಾತ್ರಿಯೇ ಜಡ್ಜ್ ಎದುರು ಹಾಜರು ಪಡಿಸಲಾಗಿತ್ತು. ಸದ್ಯ ಮುನಿರತ್ನ ಬಂಧನದ ಒಂದು ದಿನದ ಬಳಿಕ ಮತ್ತೊಂದು ಆಡಿಯೋ ವೈರಲ್​ ಆಗಿದೆ. ರಾಜರಾಜೇಶ್ವರಿನಗರ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಂದೆ ಹನುಮಂತರಾಯಪ್ಪ, ಚಲುವರಾಜು ಮತ್ತು ಸ್ನೇಹಿತನದ್ದು ಎನ್ನಲಾದ ಆಡಿಯೋ ಇದೀಗ ವೈರಲ್​ ಆಗಿದೆ.

ಈಗಾಗಲೇ ಆಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆಡಿಯೋದಲ್ಲಿ ಚಲುವರಾಜು ಮತ್ತು ಸ್ನೇಹಿತ ಸಹ ಮಾತಾಡಿರುವುದು ಇದೆ. ಸದ್ಯ ವೈರಲ್ ಆಗಿರುವ ಆಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ಪೊಲೀಸರ ತನಿಖೆ ವೇಳೆಯಲ್ಲೂ ಈ ಆಡಿಯೋ ಬಗ್ಗೆ ಪ್ರಸ್ತಾಪವಾಗಿಲ್ಲ ಎನ್ನಲಾಗುತ್ತಿದೆ.

ಧ್ವನಿ ಅವರದ್ದೇ ಎಂದು ಸಾಬೀತಾದರೆ ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಎಂದ  ಡಾ.ಜಿ.ಪರಮೇಶ್ವರ್

ಪ್ರಕರಣ ಬಗ್ಗೆ ತುಮಕೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಗುತ್ತಿಗೆದಾರ ಚಲುವರಾಜ್ ದೂರಿನ ಆಧಾರದಲ್ಲಿ ಮುನಿರತ್ನ ಬಂಧನ ಮಾಡಲಾಗಿದೆ. ಒಂದು ಸಮುದಾಯ, ಒಂದು ಜಾತಿ ಹೆಸರು ಹೇಳಿ ನಿಂದಿಸಿದ್ದಾರೆ. ಆರೋಪಿ ಮುನಿರತ್ನ ಬಂಧಿಸಿ ಜಡ್ಜ್ ಮುಂದೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಜಡ್ಜ್ 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಕಲಿ ಆಡಿಯೋಗಳನ್ನ ಸೃಷ್ಟಿಸುತ್ತಾರೆ: ಪರೋಕ್ಷವಾಗಿ ಮುನಿರತ್ನ ಆಡಿಯೋ ಡೂಪ್ಲಿಕೇಟ್ ಎಂದ ಯತ್ನಾಳ್

ಆರೋಪಿ ಶಾಸಕ ಮುನಿರತ್ನ ನಾನು ಆ ರೀತಿ ಮಾತಾಡಿಲ್ಲ ಅಂತಿದ್ದಾರೆ. ಆಡಿಯೋ ಬಗ್ಗೆ ದೃಢಪಡಿಸಿಕೊಳ್ಳಲು ಎಫ್​​ಎಸ್​ಎಲ್​ಗೆ ಕಳುಹಿಸಲಾಗುವುದು. ಒಂದು ವೇಳೆ ಧ್ವನಿ ಅವರಲ್ಲ ಅಂದರೆ ಏನ್ಮಾಡಬೇಕು ಮಾಡುತ್ತಾರೆ. ಒಂದು ವೇಳೆ ಧ್ವನಿ ಅವರದ್ದೇ ಎಂದು ಸಾಬೀತಾದರೆ ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳುತ್ತೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ ಎಂದಿದ್ದಾರೆ.

ಜಾತಿ ನಿಂದನೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ: ಭೈರತಿ ಸುರೇಶ್​ 

ಸಚಿವ ಭೈರತಿ ಸುರೇಶ್​ ಮಾತನಾಡಿದ್ದು, ಬಿಜೆಪಿ ಶಾಸಕ ಮುನಿರತ್ನ ನಾಯ್ಡುರದ್ದು ನಾನ್​ಸೆನ್ಸ್​ ಹೇಳಿಕೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಮುನಿರತ್ನ ಬೈದು ದುಡ್ಡಿಗೆ ಬೇಡಿಕೆ ಇಟ್ಟಿದ್ದಾರೆ. ಸಿಎಂ, ಡಿಸಿಎಂ ಮಾಡಿದ್ದುಣ್ಣೋ ಮಾರಾಯಾ ಅಂದಿದ್ದಾರೆ. ಆಡಿಯೋ FSLಗೆ ಕಳುಹಿಸಿ ಪರಿಶೀಲನೆ ನಡೆಸಲಾಗುತ್ತೆ. ಜಾತಿ ನಿಂದನೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:27 pm, Sun, 15 September 24

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್