ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಇ-ಮೇಲ್‌

ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆಯ ಇ-ಮೇಲ್‌ ಬಂದಿದೆ. ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್​​​​ ಕುಮಾರ್​​​​ಗೆ ವ್ಯಕ್ತಿಯೊಬ್ಬನಿಂದ ಇ-ಮೇಲ್​ ಮೂಲಕ ಜೀವಬೆದರಿಕೆ ಸಂದೇಶ ಬಂದಿದೆ. ಈ ಕುರಿತು ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಇ-ಮೇಲ್‌
ಹುಬ್ಬಳ್ಳಿ ವಿಮಾನ ನಿಲ್ದಾಣ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಆಯೇಷಾ ಬಾನು

Updated on:Jun 26, 2024 | 10:52 AM

ಹುಬ್ಬಳ್ಳಿ, ಜೂನ್.26: ಇತ್ತೀಚೆಗೆ ಬಾಂಬ್ ಬೆದರಿಕೆಯ ಇ-ಮೇಲ್ (EMail) ಸಂದೇಶಗಳು ಹೆಚ್ಚಾಗಿವೆ. ಎರಡು ದಿನದ ಹಿಂದೆಯಷ್ಟೇ ಕಲಬುರಗಿ ವಿಮಾನ ನಿಲ್ದಾಣಕ್ಕೆ (Kalaburagi Airport) ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಹುಬ್ಬಳ್ಳಿ ವಿಮಾನ ನಿಲ್ದಾಣ (Hubli Airport) ನಿರ್ದೇಶಕರಿಗೆ ಜೀವ ಬೆದರಿಕೆಯ ಇ-ಮೇಲ್‌ ಬಂದಿದೆ. ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್​​​​ ಕುಮಾರ್​​​​ಗೆ ವ್ಯಕ್ತಿಯೊಬ್ಬನಿಂದ ಇ-ಮೇಲ್​ ಮೂಲಕ ಜೀವಬೆದರಿಕೆ ಸಂದೇಶ ಬಂದಿದೆ.

ಲಾಂಗ್​ ಲೀವ್​​​​ ಪ್ಯಾಲೆಸ್ತೇನ್​​​​ ಎಂಬ ಹೆಸರಿನ ಮೇಲ್​ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ನಾವು ನಿಮ್ಮನ್ನು ನಾಶ ಮಾಡುತ್ತೇವೆ. ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರ. ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಸಂದೇಶ ಬಂದ ತಕ್ಷಣವೇ ರೂಪೇಶ್ ಅವರು ಈ ವಿಚಾರವನ್ನು ಟರ್ಮಿನಲ್ ಉಸ್ತುವಾರಿ ಪ್ರತಾಪ್ ಅವರ ಗಮನಕ್ಕೆ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನಿಸಿದ್ದು ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಈ ಕುರಿತು ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರೈಲಿನಲ್ಲಿ ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗ್​ ಕಳೆದುಕೊಂಡಿದ್ದ ಮಹಿಳೆ, 8 ವರ್ಷದ ಬಳಿಕ ರೈಲ್ವೆ ಇಲಾಖೆಯಿಂದ ಪರಿಹಾರ

ಎರಡು ದಿನಗಳ ಹಿಂದೆ ಕಲಬುರಗಿ ವಿಮಾನ ನಿಲ್ದಾಣದ ಕಟ್ಟಡದಲ್ಲಿ ಬಾಂಬ್ ಇಡಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಚಿಲಕಾ ಮಹೇಶ್ ಅವರಿಗೆ ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ತಕ್ಷಣವೇ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ, ಶ್ವಾನದಳ ತಪಾಸಣೆ ನಡೆಸಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ತಿಳಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:37 am, Wed, 26 June 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?