Karnataka Rain: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ 3 ದಿನ ಭಾರಿ ಮಳೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ 3 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಳೆImage Credit source: Udayavani
Follow us
|

Updated on: Oct 06, 2023 | 7:24 AM

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ 3 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಾಗಲಕೋಟೆಯ ಲೋಕಾಪುರ, ಬೆಂಗಳೂರು ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗಿದೆ. ಕಲಬುರ್ಗಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 15.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 1 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದೆ, ಇಂದು ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್

ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ