Karnataka Rain: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ 3 ದಿನ ಭಾರಿ ಮಳೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ 3 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Karnataka Rain: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ 3 ದಿನ ಭಾರಿ ಮಳೆ
ಮಳೆ
Image Credit source: Udayavani

Updated on: Oct 06, 2023 | 7:24 AM

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ 3 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಾಗಲಕೋಟೆಯ ಲೋಕಾಪುರ, ಬೆಂಗಳೂರು ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗಿದೆ. ಕಲಬುರ್ಗಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 15.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಕಲಬುರ್ಗಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 1 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದೆ, ಇಂದು ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ.
ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us