Karnataka Rain: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ, ಕಲಬುರಗಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬಾಗಲಕೋಟೆಯಲ್ಲಿ 14.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿ, ಬೆಳಗಾವಿ, ಕೊಪ್ಪಳ, ಹಾವೇರಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಹಗುರ ಮಳೆಯಾಗಲಿದೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದುಮ ಸಂಜೆ ವೇಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಮತ್ತಷ್ಟು ಓದಿ: Karnataka Rain: ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೆ ಮಳೆ
ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ