Karnataka Weather: ನವೆಂಬರ್ 5ರವರೆಗೆ ಕರ್ನಾಟಕದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ

|

Updated on: Oct 30, 2023 | 7:53 AM

ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ನವೆಂಬರ್ 5ರವರೆಗೆ ಕರ್ನಾಟಕದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ
ಮಳೆ
Image Credit source: NDTV
Follow us on

ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಪಣಂಬೂರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 16.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 3ರವರೆಗೂ ಮಳೆ

ಈ ಬಾರಿ ಮುಂಗಾರಿನಲ್ಲಿ ಮಳೆ ತುಂಬಾ ಕಡಿಮೆಯಾಗಿದೆ, ಹಲವು ಜಿಲ್ಲೆಗಳು ಬರದಿಂದ ಕಂಗೆಟ್ಟಿವೆ, ಹಿಂಗಾರು ಮಳೆಯಾದರೂ ಉತ್ತಮವಾಗಿ ಬಂದಲ್ಲಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕೊಂಚ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:22 am, Mon, 30 October 23