AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ರಾಜ್ಯಾದ್ಯಂತ ಒಣಹವೆ, ಅಕ್ಟೋಬರ್ 29ರಿಂದ ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಅಕ್ಟೋಬರ್ 29ರಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

Karnataka Rain: ರಾಜ್ಯಾದ್ಯಂತ ಒಣಹವೆ, ಅಕ್ಟೋಬರ್ 29ರಿಂದ ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮಳೆ
ನಯನಾ ರಾಜೀವ್
|

Updated on:Oct 24, 2023 | 7:27 AM

Share

ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಅಕ್ಟೋಬರ್ 29ರಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ದಕ್ಷಿಣ ಒಳನಾಡಿನ ಚಿತ್ರದುರ್ಗ,ಮಂಡ್ಯ, ದಾವಣಗೆರೆ, ಮೈಸೂರು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಗ್ರಾಮಾಂತರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್​ ಹೆಚ್ಚಿರುವ ಸಾಧ್ಯತೆ ಇದೆ. ಶಿರಾಲಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೀದರ್​ನಲ್ಲಿ 15.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ರಾಜ್ಯಾದ್ಯಂತ ಗರಿಷ್ಠ ಉಷ್ಣಾಂಶ ಏರಿಕೆ, ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಗರಿಷ್ಠ ಉಷ್ಣಾಂಶ ಕೊಂಚ ಹೆಚ್ಚಳವಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:26 am, Tue, 24 October 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More