ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಅಕ್ಟೋಬರ್ 29ರಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ದಕ್ಷಿಣ ಒಳನಾಡಿನ ಚಿತ್ರದುರ್ಗ,ಮಂಡ್ಯ, ದಾವಣಗೆರೆ, ಮೈಸೂರು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಗ್ರಾಮಾಂತರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಹೆಚ್ಚಿರುವ ಸಾಧ್ಯತೆ ಇದೆ.
ಶಿರಾಲಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೀದರ್ನಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rain: ರಾಜ್ಯಾದ್ಯಂತ ಗರಿಷ್ಠ ಉಷ್ಣಾಂಶ ಏರಿಕೆ, ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ
ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಗರಿಷ್ಠ ಉಷ್ಣಾಂಶ ಕೊಂಚ ಹೆಚ್ಚಳವಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:26 am, Tue, 24 October 23