AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಕರಾವಳಿಯಲ್ಲಿ ಅ.25ರವರೆಗೂ ಮಳೆ, ಈ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ

ಕರ್ನಾಟಕದ ಕರಾವಳಿಯಲ್ಲಿ ಅಕ್ಟೋಬರ್ 25ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಹಾಗೆಯೇ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ವರೆಗೆ ಹೆಚ್ಚಾಗಲಿದೆ.

Karnataka Rain: ಕರ್ನಾಟಕದ ಕರಾವಳಿಯಲ್ಲಿ ಅ.25ರವರೆಗೂ ಮಳೆ, ಈ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ
ಮಳೆImage Credit source: Mint
ನಯನಾ ರಾಜೀವ್
|

Updated on: Oct 19, 2023 | 7:34 AM

Share

ಕರ್ನಾಟಕದ ಕರಾವಳಿಯಲ್ಲಿ ಅಕ್ಟೋಬರ್ 25ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಹಾಗೆಯೇ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ವರೆಗೆ ಹೆಚ್ಚಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಪುತ್ತೂರು, ಎನ್​ಆರ್ ಪುರ, ಬೇಲೂರು, ಹಳಿಯಾಳ, ಕಳಸ, ಸಕಲೇಶಪುರ, ಗೇರುಸೊಪ್ಪ, ಕುಮಟಾ, ಉಪ್ಪಿನಂಗಡಿ, ಭಾಗಮಂಡಲ, ನಾಪೋಕ್ಲು, ಸೋಮವಾರಪೇಟೆ, ಕಮ್ಮರಡಿ, ಕೊಪ್ಪ, ಜಯಪುರ, ತಾಳಗುಪ್ಪ, ಮೈಸೂರು, ಹುಣಸೂರಿನಲ್ಲಿ ಮಳೆಯಾಗಿದೆ.

ಕಲಬುರ್ಗಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ವಿಜಯಪುರ ಹಾಗೂ ಚಿಕ್ಕನಹಳ್ಳಿಯಲ್ಲಿ 18.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಬೀದರ್, ಬೆಳಗಾವಿ, ಧಾರವಾಡ, ಕೊಪ್ಪಳ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಚಿತ್ರದುರ್ಗ, ಹಾಸನ, ಮೈಸೂರು, ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯದಲ್ಲಿ ಕೂಡ ಉಷ್ಣಾಂಶ 1-2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಅಕ್ಟೋಬರ್ 24ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್