Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆ

|

Updated on: Sep 19, 2023 | 7:31 AM

ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮುಂದಿನ ಐದಾರು ದಿನ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಮಳೆಯಾಗಲಿದೆ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆ
ಮಳೆ
Image Credit source: The Hans India
Follow us on

ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮುಂದಿನ ಐದಾರು ದಿನ ಭಾರಿ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಮಳೆಯಾಗಲಿದೆ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಕೋಟ, ಕೊಟ್ಟಿಗೆಹಾರ, ಕಾರವಾರ, ಉಡುಪಿ, ಮಂಚಿಕೆರೆ, ಅಂಕೋಲಾ, ಕಾರ್ಕಳ, ಬೆಳ್ತಂಗಡಿ, ಹೊಸಕೋಟೆ, ದೇವನಹಳ್ಳಿ, ಚಿಕ್ಕಬಳ್ಳಾಪುರ, ಮಾಲೂರು, ಧರ್ಮಸ್ಥಳ, ಗೇರುಸೊಪ್ಪ, ಯಲ್ಲಾಪುರ, ಲೋಂಡ, ಬೆಳಗಾವಿ ನಗರ, ಬಾಗಲಕೋಟೆ, ಕೂಡಲಸಂಗಮ, ಭಾಗಮಂಡಲ, ಶೃಂಗೇರಿ, ಪೊನ್ನಂಪೇಟೆ, ಗೌರಿಬಿದನೂರು, ದೊಡ್ಡಬಳ್ಳಾಪುರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಸ್ವಲ್ಪ ಮೋಡಕವಿದ ವಾತಾವರಣವಿದೆ, ಸ್ವಲ್ಪ ಶುಭ್ರ ಆಕಾಶವಿದೆ, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ

ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ