AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೆ ಮಳೆ

ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಅಡಕಿ, ಮುಧೋಳ, ಕದ್ರಾ, ಮಂಕಿಯಲ್ಲಿ ಮಳೆಯಾಗಿದೆ, ನೈಋತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಮಳೆ
ನಯನಾ ರಾಜೀವ್
|

Updated on: Oct 04, 2023 | 7:20 AM

Share

ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಅಡಕಿ, ಮುಧೋಳ, ಕದ್ರಾ, ಮಂಕಿಯಲ್ಲಿ ಮಳೆಯಾಗಿದೆ, ನೈಋತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಶಿರಾಲಿಯಲ್ಲಿ 32.0 ಡಿಗ್ರಿ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬಾಗಲಕೋಟೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಒಳನಾಡಿನಲ್ಲೂ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲು ಕಾಣಿಸಿಕೊಂಡಿದ್ದು, ಸಂಜೆ ವೇಳೆ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಹಗುರ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಮತ್ತಷ್ಟು ಓದಿ:Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 9ರವರೆಗೆ ಮಳೆ

ಎಚ್​ಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್