ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಅಡಕಿ, ಮುಧೋಳ, ಕದ್ರಾ, ಮಂಕಿಯಲ್ಲಿ ಮಳೆಯಾಗಿದೆ, ನೈಋತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಶಿರಾಲಿಯಲ್ಲಿ 32.0 ಡಿಗ್ರಿ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬಾಗಲಕೋಟೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರಾವಳಿಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಒಳನಾಡಿನಲ್ಲೂ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲು ಕಾಣಿಸಿಕೊಂಡಿದ್ದು, ಸಂಜೆ ವೇಳೆ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಹಗುರ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಮತ್ತಷ್ಟು ಓದಿ:Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 9ರವರೆಗೆ ಮಳೆ
ಎಚ್ಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ