Karnataka Weather: ಬೆಂಗಳೂರು ಸೇರಿ ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಬೆಂಗಳೂರು ಸೇರಿ ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆ
ಮಳೆ

Updated on: Oct 31, 2023 | 7:51 AM

ಬೆಂಗಳೂರು ಸೇರಿದಂತೆ ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕುಮಟಾ, ಬೆಂಗಳೂರು, ಚಿಕ್ಕಮಗಳೂರು, ಕೊಪ್ಪ, ಕೊಡಗು, ಶಿರಾಲಿ, ಸಿದ್ದಾಪುರ, ಬೆಳ್ತಂಗಡಿ, ಬಾಳೆಹೊನ್ನೂರು, ಮಡಿಕೇರಿ, ಮೂರ್ನಾಡು, ಶೃಂಗೇರಿ, ಕಳಸ, ಉಪ್ಪಿನಂಗಡಿ, ಮಾಣಿ, ಸುಳ್ಯ, ಧರ್ಮಸ್ಥಳ, ಉಡುಪಿ, ಕೋಟ, ಸಿದ್ದಾಪುರ, ಗೇರುಸೊಪ್ಪ, ಜಯಪುರ, ಸೋಮವಾರಪೇಟೆ, ಭಾಗಮಂಡಲ, ವಿರಾಜಪೇಟೆ, ಹುಂಚದಕಟ್ಟೆ, ಸಕಲೇಶಪುರ, ಹುಣಸೂರಿನಲ್ಲಿ ಮಳೆಯಾಗಿದೆ.

ಕಾರವಾರದಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ವಿಜಯಪುರದಲ್ಲಿ 16.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ನವೆಂಬರ್ 5ರವರೆಗೆ ಕರ್ನಾಟಕದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ

ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us