Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕು, ಸೆಪ್ಟೆಂಬರ್ 20ರವರೆಗೂ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ 20ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕು, ಸೆಪ್ಟೆಂಬರ್ 20ರವರೆಗೂ ಮಳೆ
ಮಳೆ
Image Credit source: English Jagaran

Updated on: Sep 14, 2023 | 7:30 AM

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ 20ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಚನ್ನಪಟ್ಟಣ, ಧರ್ಮಸ್ಥಳ, ಗೇರುಸೊಪ್ಪ, ಸಕಲೇಶಪುರ, ಮದ್ದೂರು, ಮಡಿಕೇರಿ, ಮಂಗಳೂರು, ಮಾಣಿ, ಪುತ್ತೂರು, ಮುಡುಗೋಡ, ಕೊಪ್ಪಳ, ವಿರಾಜಪೇಟೆ, ಲಿಂಗನಮಕ್ಕಿ, ಕಮ್ಮರಡಿಯಲ್ಲಿ ಮಳೆಯಾಗಿದೆ. ನೈಋತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿತ್ತು, ಕರಾವಳಿಯಲ್ಲಿ ವ್ಯಾಪಕವಾಗಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನ ಕೆಲವೆಡೆ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಮುಂದಿನ 5 ದಿನ ಮಳೆ

ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us