Karnataka Rain: ಅಕ್ಟೋಬರ್ 2ರವರೆಗೆ ಕರ್ನಾಟಕದಾದ್ಯಂತ ಮಳೆ, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದಾದ್ಯಂತ ಅಕ್ಟೋಬರ್ 02ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರದಲ್ಲಿ ಮಳೆಯಾಗಲಿದೆ. ಇನ್ನುಳಿದಂತೆ ಬೀದರ್, ಧಾರವಾಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rain: ಅಕ್ಟೋಬರ್ 2ರವರೆಗೆ ಕರ್ನಾಟಕದಾದ್ಯಂತ ಮಳೆ, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆ

Updated on: Sep 26, 2023 | 7:41 AM

ಕರ್ನಾಟಕದಾದ್ಯಂತ ಅಕ್ಟೋಬರ್ 02ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರದಲ್ಲಿ ಮಳೆಯಾಗಲಿದೆ. ಇನ್ನುಳಿದಂತೆ ಬೀದರ್, ಧಾರವಾಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.

ಶಹಪುರದಲ್ಲಿ ಹೆಚ್ಚು ಮಳೆಯಾಗಿದೆ, ಅಂಕೋಲಾ, ಹೆಬ್ಬೂರು, ಕುಮಟಾ, ಗೇರುಸೊಪ್ಪ, ಮಂಕಿ, ಗೋಕರ್ಣ, ಕುಂದಾಪುರ, ಕೋಟ, ಸಿದ್ದಾಪುರ, ಬೇಲಿಕೇರಿ, ಹೊನ್ನಾವರ, ಖಜೂರಿ, ಮೈಸೂರು, ರಾಯಲ್ಪಾಡು, ಉಡುಪಿ, ಕಾರ್ಕಳ, ಮಂಗಳೂರು, ಉಪ್ಪಿನಂಗಡಿ, ಮುಲ್ಕಿ, ಕದ್ರಾ, ಕೆಂಭಾವಿ, ಮುನಿರಾಬಾದ್, ಗಬ್ಬೂರು, ಆಳಂದ, ಸೇಡಂ, ಗುಬ್ಬಿ, ಚಿತ್ರದುರ್ಗ, ಕುಡತಿನಿ, ಕಾರವಾರ, ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ಕಿರವತ್ತಿ, ಮುಂಡಗೋಡ, ಯಲ್ಲಾಪುರ, ಮಂಚಿಕೆರೆ, ಜಾಲಹಳ್ಳಿ, ಮಹಾಗೋಣ, ಮುಧೋಳ, ಅಡಕಿ, ಕವಡಿಮಟ್ಟಿ, ಅರ್ಗ,ಭಾಲ್ಕಿ, ಮಂಠಾಳ, ಹಾವೇರಿ, ಚಿಕ್ಕಬಳ್ಳಾಪುರ, ಕಡೂರು, ಕೋಲಾರ, ಲಿಂಗನಮಕ್ಕಿ, ತಾಳಗುಪ್ಪ, ತ್ಯಾಗರ್ತಿ, ಯುಗಟಿ, ಹೊಸಕೋಟೆಯಲ್ಲಿ ಮಳೆಯಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ

ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us