ದಾವಣಗೆರೆ: ಜಮೀನಿನಲ್ಲಿದ್ದ ಟಿಸಿ ಸ್ಥಳಾಂತರ ವೇಳೆ ಲೈನ್‌ಮನ್ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾರಿಕೊಪ್ಪ ಬಳಿ ನಡೆದಿದೆ. ಕರ್ತವ್ಯದಲ್ಲಿ ನಿರತರಾಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕೆ.ಹೆಚ್.ಚಿಕ್ಕಸ್ವಾಮಿ(33) ಮೃತಪಟ್ಟಿದ್ದಾರೆ. ಇನ್ನೂ ಈ ಘಟನೆಗೆ ಸಂಬಂಧಿಸಿದ್ದಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ 22 ತಿಂಗಳ ಹಿಂದೆ ಮದುವೆ ಆಗಿದ್ದ ಕೆ.ಹೆಚ್.ಚಿಕ್ಕಸ್ವಾಮಿ ಮೃತಪಟ್ಟಿದ್ದು, ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಇನ್ನೂ ಸ್ಥಳಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿದ್ದು, ಸಾಂತ್ವಾನ ಮಾಡಿದ್ದಾರೆ. ಕುಟುಂಬ ಸದಸ್ಯರಿಗೆ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಕೂಡ ಸಹಾಯ ಮಾಡಿದ್ದಾರೆ. ಇಷ್ಟೇ ಅಲ್ಲದೇ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆಯನ್ನು ಕೂಡ ನೀಡಿದ್ದಾರೆ.
ಇದನ್ನೂ ಓದಿ: ಪ್ರತ್ಯೇಕ ಘಟನೆಯಲ್ಲಿ ನಾಲ್ವರ ದುರ್ಮರಣ: ಚಿತ್ರದುರ್ಗ, ವಿಜಯಪುರ, ಹಾಸನದಲ್ಲಿ ಅಪಘಾತ
ಇದನ್ನೂ ಓದಿ: ಕೋಟಿ ಕೋಟಿ ಹಣ ಹಾಕಿ ಬೃಹತ್ ಟ್ಯಾಂಕ್ ನಿರ್ಮಾಣ.. 15 ವರ್ಷವಾದ್ರೂ ವಿದ್ಯುತ್ ಸಂಪರ್ಕ ಕೊಡದೆ ನಿರ್ಲಕ್ಷ್ಯ, ನೀರಿಗಾಗಿ ಪರದಾಟ
Published On - 3:59 pm, Sun, 14 March 21