Karnataka Dam Water Level: ಲಿಂಗನಮಕ್ಕಿ ಡ್ಯಾಂ ಭರ್ತಿಗೆ ಕೆಲವೇ ಅಡಿ ಬಾಕಿ, 14 ಪ್ರಮುಖ ಜಲಾಶಯಗಳ ನೀರಿನ ಮಟ್ಟ ವಿವರ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಅಧಿಕಗೊಂಡಿದ್ದರಿಂದ ನದಿಗಳು ಮೈದುಂಬಿ ಹರಿಯುತ್ತಿವೆ.ಇದರಿಂದ ಜಲಾಯಶಗಳು ಭರ್ತಿಯಾಗುತ್ತಿವೆ. ಭದ್ರಾ, ಹಾರಂಗಿ, ಕಬಿನಿ, ಕೆಆರ್​ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದರೆ ಸೆಪ್ಟೆಂಬರ್​​​ ರಂದು ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ ಇಲ್ಲಿದೆ

Karnataka Dam Water Level: ಲಿಂಗನಮಕ್ಕಿ ಡ್ಯಾಂ ಭರ್ತಿಗೆ ಕೆಲವೇ ಅಡಿ ಬಾಕಿ, 14 ಪ್ರಮುಖ ಜಲಾಶಯಗಳ ನೀರಿನ ಮಟ್ಟ ವಿವರ
ಲಿಂಗನಮಕ್ಕಿ ಜಲಾಶಯ
Follow us
ವಿವೇಕ ಬಿರಾದಾರ
|

Updated on: Sep 04, 2024 | 7:13 AM

ಕರ್ನಾಟಕದಲ್ಲಿ ಮಳೆ ಪ್ರಮಾಣ ಏರಿಕೆಗೊಂಡಿದ್ದರಿಂದ ಜಲಾಶಯದ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ.ಹಾಗೆ ಹೊರ ಹರಿವಿನ ಪ್ರಮಾಣದಲ್ಲೂ ಹೆಚ್ಚಳವಾಗಿದೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಶರಾವತಿ ನದಿ ತುಂಬಿ ಹರಿಯುತ್ತಿದೆ. ಇದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಲಿಂಗನಮಕ್ಕಿ ಜಲಾಶಯ ಭರ್ತಿಗೆ ಕೆಲವೇ ಅಡಿ ಬಾಕಿ ಇದೆ. ಹಾಗಾದರೆ ಲಿಂಗನಮಕ್ಕಿ ಸೇರಿದಂತೆ ಕರ್ನಾಟಕದ ಪ್ರಮುಖ 14 ಜಲಾಶಯಗಳ (Karnataka Dam Water Level)  ನೀರಿನ ಮಟ್ಟ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 120.08 122.31 64908 29712
ತುಂಗಭದ್ರಾ ಜಲಾಶಯ (Tungabhadra Dam) 497.71 105.79 99.35 74.52 29907 15441
ಮಲಪ್ರಭಾ ಜಲಾಶಯ (Malaprabha Dam) 633.80 37.73 36.34 21.98 3544 3544
ಕೆ.ಆರ್.ಎಸ್ (KRS Dam) 38.04 49.45 48.89 22.47 11248 10715
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 147.08 68.50 16970 13068
ಕಬಿನಿ ಜಲಾಶಯ (Kabini Dam) 696.13 19.52 19.30 13.60 8702 8350
ಭದ್ರಾ ಜಲಾಶಯ (Bhadra Dam) 657.73 71.54 67.83 46.25 7248 6948
ಘಟಪ್ರಭಾ ಜಲಾಶಯ (Ghataprabha Dam) 662.91 51.00 50.80 41.44 6914 5618
ಹೇಮಾವತಿ ಜಲಾಶಯ (Hemavathi Dam) 890.58 37.10 37.06 23.54 7541 6350
ವರಾಹಿ ಜಲಾಶಯ (Varahi Dam) 594.36 31.10 24.26 9.18 5283 0
ಹಾರಂಗಿ ಜಲಾಶಯ (Harangi Dam)​​ 871.38 8.50 8.38 7.25 7077 7358
ಸೂಫಾ (Supa Dam) 564.00 145.33 133.28 77.28 24095 4207
ನಾರಾಯಣಪುರ ಜಲಾಶಯ (Narayanpura Dam) 492.25 33.31 31.06 20.55 39789 18737
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 21.34 24.35 693 135

ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂ ಕೆಆರ್​​ಎಸ್ ಜಲಾಶಯಕ್ಕೆ ಒಳಹರಿವು​ ಹೆಚ್ಚಿದ್ದರಿಂದ ಕಾವೇರಿ ನದಿ ಮೂಲಕ ಹರಿಬಿಡುವ ನೀರಿನ ಪ್ರಮಾಣವನ್ನೂ ಹೆಚ್ಚಿಸಲಾಗಿದೆ. ಹಾಗೇ ಉತ್ತರ ಕರ್ನಾಟಕದ ಆಲಮಟ್ಟಿ ಜಲಾಶಯಕ್ಕೆ ಹರಿದು ಬರುತ್ತಿರುವ ಭಾರೀ ಪ್ರಮಾಣದ ನೀರನ್ನು ಕೃಷ್ಣಾ ನದಿ ಮೂಲಕ ಹರಿ ಬಿಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ