ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ: ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್, ಸರ್ಕಾರಕ್ಕೆ ಬಿಗ್ ರಿಲೀಫ್

ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಯಥಾಸ್ಥಿತಿ ಮಧ್ಯಂತರ ಆದೇಶ ತೆರವುಗೊಳಿಸಿದೆ.

ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ: ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್, ಸರ್ಕಾರಕ್ಕೆ ಬಿಗ್ ರಿಲೀಫ್
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 23, 2023 | 12:18 PM

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ (lingayat panchamasali reservation) 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್(karnataka High Court)​ ಇಂದು(ಮಾರ್ಚ್ 23) ತೆರವುಗೊಳಿಸಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್​​ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದರು. ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಈಗ ಹೊಸ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ಸಲ್ಲಿಸಲು ಸೂಚನೆ ನೀಡಿದೆ. ಅಲ್ಲದೇ ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕೆಂದು ಸೂಚನೆ ನೀಡಿ ಮಧ್ಯಂತರ ಆದೇಶ ತೆರವುಗೊಳಿಸಿದೆ. ಇದರೊಂದಿಗೆ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲ.

ಇದನ್ನೂ ಓದಿ: 2C 2D Reservation ಒಕ್ಕಲಿಗರಿಗೆ 2ಸಿ, ಲಿಂಗಾಯತರಿಗೆ 2ಡಿ ಕೆಟಗರಿಗೆ ಮೀಸಲಾತಿಗೆ ಬ್ರೇಕ್ ಹಾಕಿದ ಕರ್ನಾಟಕ ಹೈಕೋರ್ಟ್

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕೆಂದು ಡಿ.ಜಿ.ರಾಘವೇಂದ್ರ ಎಂಬುವರು ಪಿಐಎಲ್​ ಸಲ್ಲಿಸಿದ್ದರು. ಇದನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೀಸಲಾತಿ ಹಮಚಿಕೆ ಸಂಬಂಧಿಸಿದಂತೆ ಪ್ರವರ್ಗ 2ಎ ಸೇರ್ಪಡೆ ಮಾಡುವ ಅಥವಾ 2ಸಿ, 2ಡಿ ಪ್ರವರ್ಗ ಸೃಷ್ಟಿಸಲು ಸರ್ಕಾರ ಕೈಗೊಂಡಿದ್ದ ನಿರ್ಣಯದ ಮುಂದಿನ ಪ್ರಕ್ರಿಯೆಗಳಿಗೆ ತಾತ್ಕಾಲಿಕ ತಡೆ ಬಿದ್ದಿತ್ತು.

ಆದ್ರೆ, ಇದೀಗ 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್​​ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದ್ದರಿಂದ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ. ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ 2ಸಿ, 2ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲ.

ಪಂಚಮಸಾಲಿ ಮೀಸಲು ಬಗ್ಗೆ ಶುಕ್ರವಾರ ನಿರ್ಧಾರ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಕೊನೆಯದು ಎನ್ನಲಾಗಿರುವ ಮಹತ್ವದ ಸಭೆ ಶುಕ್ರವಾರ ನಡೆಯಲಿದ್ದು, ಸಾಕಷ್ಟು ಚರ್ಚೆಗೆ ಈಡು ಮಾಡಿರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಇದಲ್ಲದೆ ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ವಿವಿಧ ಸಮುದಾಯಗಳನ್ನು ಓಲೈಸುವ ನಿಟ್ಟಿನಲ್ಲಿ ಹಲವು ಪ್ರಮುಖ ಕೊಡುಗೆಗಳ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಮುಂದಿನ ವಾರಾಂತ್ಯದ ವೇಳೆ ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡುವ ಸಂಭವವಿದೆ. ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಗೆ ಬರಲಿರುವುದರಿಂದ ಬಹುಶಃ ಶುಕ್ರವಾರದ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವುದಕ್ಕೆ ಸೀಮಿತವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ

Published On - 11:55 am, Thu, 23 March 23

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್