ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಬೆನ್ನಲ್ಲೇ ಇದೀಗ 2 ದಿನ ಮದ್ಯ ಮಾರಾಟ ನಿಷೇಧ

| Updated By: ಗಂಗಾಧರ​ ಬ. ಸಾಬೋಜಿ

Updated on: Sep 20, 2024 | 8:25 PM

ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಕೇಸ್​ಗೆ ಸಂಬಂಧಿಸಿದಂತೆ 30 ಜನರನ್ನು ಬಂಧಿಸಲಾಗಿದೆ. ಸದ್ಯ ದಾವಣಗೆರೆ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧಿಸಿದ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.

ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಬೆನ್ನಲ್ಲೇ ಇದೀಗ 2 ದಿನ ಮದ್ಯ ಮಾರಾಟ ನಿಷೇಧ
ದಾವಣಗೆರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಬೆನ್ನಲ್ಲೇ ಇದೀಗ 2 ದಿನ ಮದ್ಯ ಮಾರಾಟ ನಿಷೇಧ
Follow us on

ದಾವಣಗೆರೆ, ಸೆಪ್ಟೆಂಬರ್ 20: ಪ್ರಕ್ಷುಬ್ದಗೊಂಡಿದ್ದ ನಗರದ ಇದೀಗ ತಣ್ಣಗಾಗಿದೆ. ಇದಕ್ಕೆ ಕಾರಣವಾಗಿದ್ದು, ನಿನ್ನೆ ಗಣೇಶ ಮೆರವಣಿಗೆ ವೇಳೆ ನಡೆದ ಎರಡು ಕೋಮಿನ ನಡುವೆ ಕಲ್ಲು ತೂರಾಟ. ಇವರೆಗೆ ದಾಖಲಾಗಿರುವ 4 ಪ್ರಕರಣಗಳಲ್ಲಿ 30 ಜನರನ್ನು ಬಂಧಿಸಲಾಗಿದೆ. ನಗರದಲ್ಲಿ ಇನ್ನು ಗಣೇಶ ವಿಸರ್ಜನೆ ಹಿನ್ನೆಲೆ 2 ದಿನ ಮದ್ಯ (Liquor) ಮಾರಾಟ ನಿಷೇಧಿಸಿ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರಿನಲ್ಲಿ ಸೆ. 21 ರಂದು ಹಾಗೂ ಚನ್ನಗಿರಿ ತಾಲೂಕಿನಾದ್ಯಂತ  ಮತ್ತು ಹೊನ್ನಾಳಿ ಪಟ್ಟಣದಲ್ಲಿ ಸೆ. 22 ರಂದು ಗಣೇಶಮೂರ್ತಿ ವಿಸರ್ಜನೆ ನಡೆಯಲಿದೆ ಹೀಗಾಗಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ನಿರ್ಬಂಧ ಮಾಡಲಾಗಿದೆ.

ಇದನ್ನೂ ಓದಿ: ದಾವಣಗೆರೆ: ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳಿಂದ ಕಲ್ಲುತೂರಾಟ; ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯ

ಸೆ. 21 ರಂದು ಮಲೇಬೆನ್ನೂರು ವ್ಯಾಪ್ತಿ ಮತ್ತು ಸೆ. 22ರಂದು ಚನ್ನಗಿರಿ ತಾಲ್ಲೂಕಿನಾದ್ಯಂತ ಹಾಗೂ ಹೊನ್ನಾಳಿ ಪಟ್ಟಣ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದು, ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಬಂಧಿತ ಯುವಕನ ಮನೆಗೆ ರೇಣುಕಾಚಾರ್ಯ ಭೇಟಿ 

ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಕೇಸ್​ನಲ್ಲಿ ಅರೆಸ್ಟ್ ಆದ ಯುವಕರ ಮನೆಗೆ ಇಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯ ಭೇಟಿ ನೀಡಿದ್ದಾರೆ. ಈ ವೇಳೆ ಯುವಕರ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಸಮರ್ಥ ಗೃಹ ಸಚಿವರಿದ್ದಾರೆ. ಗೃಹ ಸಚಿವ ಪರಮೇಶ್ವರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರವಿಲ್ಲ. ಹಿಂದು ವಿರೋಧಿ ಸರ್ಕಾರ ಇದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ಸರ್ಕಾರ ಇದೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಮಂಡ್ಯ ನಾಗಮಂಗಲ ಗಲಭೆ ಪ್ರಕರಣ: ಮತ್ತೊಬ್ಬ ಅಧಿಕಾರಿಯ ತಲೆದಂಡ

ಹಿಂದೂಗಳನ್ನ ಮುಟ್ಟಿದರೆ ನಾವು ಸುಮ್ಮನಿರಲ್ಲ. ನಾವು ಕೈಗೆ ಬಳೆ ಹಾಕಿಕೊಂಡಿಲ್ಲ. ಅಂತಹ ಸಂದರ್ಭ ಬಂದರೆ ಮಚ್ಚು ಬಳಸುವುದು ಗೊತ್ತು. ದೇಶದ್ರೋಹಿಗಳನ್ನ ಕಂಡ ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:24 pm, Fri, 20 September 24