ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 18 ಆನೆಗಳ‌ ಪಟ್ಟಿ ಬಿಡುಗಡೆ

ಈ ಬಾರೀ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಅದ್ದೂರಿಯಿಂದ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ತಿರ್ಮಾನಿಸಲಾಗಿದೆ. ದಸರಾ ಮಹೋತ್ಸವದ ಕೇಂದ್ರ ಬಿಂದು ಗಜಪಡೆ. ಹೀಗಾಗಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 18 ಆನೆಗಳ‌ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 18 ಆನೆಗಳ‌ ಪಟ್ಟಿ ಬಿಡುಗಡೆ
ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 18 ಆನೆಗಳ‌ ಪಟ್ಟಿ ಬಿಡುಗಡೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Aug 12, 2024 | 9:34 PM

ಮೈಸೂರು, ಆಗಸ್ಟ್​ 12: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವ-2024 ಅಕ್ಟೋಬರ್​ 3 ರಂದು ಉದ್ಘಾಟನೆ, ಅಕ್ಟೋಬರ್ 12 ರಂದು ಜಂಬೂಸವಾರಿ (Jamboo Savari) ನಡೆಯಲಿದೆ. ಇದೀಗ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 13 ಗಂಡು ಮತ್ತು 05 ಹೆಣ್ಣು ಆನೆ ಸೇರಿದಂತೆ ಒಟ್ಟು 18 ಆನೆಗಳ‌ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಈ ಬಾರಿಯೂ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ಹೆಗಲಿಗಿದೆ. ಗಜಪಯಣ, ಅಭಿಮನ್ಯು ಸೇರಿ 14 ಆನೆ ಭಾಗಿ ಆಗಲಿವೆ. ಪ್ರಥಮ ಹಂತದಲ್ಲಿ 9, 2ನೇ ಹಂತದಲ್ಲಿ 5 ಆನೆ ಆಗಮಿಸಲಿವೆ. ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದು, ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಗೋಪಿ, ಭೀಮ, ಲಕ್ಷ್ಮೀ, ಕಂಜನ್, ರೋಹಿತ್, ಏಕಲವ್ಯ.

ಇದನ್ನೂ ಓದಿ: ಈ ಬಾರಿ ಅದ್ಧೂರಿ ದಸರಾ ಆಚರಣೆ: ಅ 3 ರಂದು ಉದ್ಘಾಟನೆ, ಅ 12 ಕ್ಕೆ ಜಂಬೂಸವಾರಿ

ಎರಡನೇಯ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮೀ, ಹಿರಣ್ಯ, ಮೀಸಲು, ಹರ್ಷ, ಅಯ್ಯಪ್ಪ, ಪಾರ್ಥಸಾರಥಿ, ಮಾಲದೇವಿ. ಹೀಗೆ ಒಟ್ಟು 13 ಗಂಡು ಆನೆ, 5 ಹೆಣ್ಣು ಆನೆಗಳು ಜಂಬೂಸವಾರಿಯಲ್ಲಿ ಭಾಗಿಯಾಗಲಿವೆ.

ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಸದ್ಯ ದಸರೆಗಾಗಿ 18 ಆನೆಗಳನ್ನ ಗುರುತಿಸಲಾಗಿದೆ. ದಸರಾ ಮಹೋತ್ಸವದ ಕೇಂದ್ರ ಬಿಂದು ಗಜಪಡೆ. ಹೀಗಾಗಿ ದಸರಾ ಮಹೋತ್ಸವದ ಸುಮಾರು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿವೆ. ಆಗಸ್ಟ್ 21ಕ್ಕೆ ಗಜಪಯಣ ನಿಗದಿ ಆಗಿದ್ದು, ಈಗಾಗಲೇ ನಾಲ್ಕು ಹೆಚ್ಚುವರಿ ಆನೆಗಳನ್ನು ಸಹ ಗುರುತಿಸಲಾಗಿದೆ.

ಇದನ್ನೂ ಓದಿ: ಚಾಮುಂಡೇಶ್ವರಿ ದೇವಸ್ಥಾನ ನಮ್ಮ‌ ಆಸ್ತಿ, ಅವಕಾಶ ಕೊಟ್ರೆ ನಾವೇ ನಿರ್ವಹಣೆ ಮಾಡ್ತೇವೆ‌: ಪ್ರಮೋದಾದೇವಿ

ಈ ಬಾರಿಯೂ ಒಟ್ಟು 14 ಆನೆಗಳನ್ನು ವಿವಿಧ ಶಿಬಿರಗಳಿಂದ ಕರೆತರಲಾಗುತ್ತಿದೆ. ಮೊದಲ ತಂಡದ 9 ಆನೆಗಳಿಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ 21ರಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಅಕ್ಟೋಬರ್​ 3 ರಂದು ಉದ್ಘಾಟನೆ, ಅಕ್ಟೋಬರ್ 12 ರಂದು ಜಂಬೂಸವಾರಿ ನಡೆಯಲಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಿರ್ಮಾನಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:18 pm, Mon, 12 August 24